ನ್ಯಾಯಸ್ಥಾಪಕರು 16:4 - ಪರಿಶುದ್ದ ಬೈಬಲ್4 ತರುವಾಯ ಸಂಸೋನನು ದೆಲೀಲಾ ಎಂಬ ಸ್ತ್ರೀಯನ್ನು ಪ್ರೀತಿಸಿದನು. ಅವಳು ಸೋರೇಕ್ ಕಣಿವೆಯವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಮಹಿಳೆಯಿಂದ ಮೋಹಿತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದರ ತರುವಾಯ, ಸೊರೇಕ್ ತಗ್ಗಿನಲ್ಲಿದ್ದ ದೆಲೀಲ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು. ಅಧ್ಯಾಯವನ್ನು ನೋಡಿ |
ಆದರೆ ಸಂಸೋನನು ಆ ವೇಶ್ಯೆಯ ಜೊತೆಯಲ್ಲಿ ಮಧ್ಯರಾತ್ರಿಯವರೆಗೆ ಮಾತ್ರ ಇದ್ದನು. ಸಂಸೋನನು ಮಧ್ಯರಾತ್ರಿಯಲ್ಲಿ ಎದ್ದುಬಿಟ್ಟನು. ಸಂಸೋನನು ನಗರ ದ್ವಾರದ ಬಾಗಿಲನ್ನು ಗಟ್ಟಿಯಾಗಿ ಹಿಡಿದು ಎಳೆದನು. ಕದಗಳು ಗೋಡೆಗಳಿಂದ ಕಿತ್ತುಬಂದವು. ಸಂಸೋನನು ಬಾಗಿಲಕದಗಳನ್ನೂ ಅದರ ನಿಲುವುಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ತನ್ನ ಹೆಗಲ ಮೇಲೆ ಹೊತ್ತು ಹೆಬ್ರೋನ್ ನಗರದ ಹತ್ತಿರವಿರುವ ಪರ್ವತ ಶಿಖರಕ್ಕೆ ತೆಗೆದುಕೊಂಡು ಹೋದನು.
ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.