ನ್ಯಾಯಸ್ಥಾಪಕರು 16:7 - ಪರಿಶುದ್ದ ಬೈಬಲ್7 ಅದಕ್ಕೆ ಸಂಸೋನನು, “ಬಿಲ್ಲಿನ ಏಳು ಹೊಸತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬೇರೆ ಮನುಷ್ಯರಂತೆ ಬಲಹೀನನಾಗುತ್ತೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವನು, “ಕರುಳಿನ ಏಳು ಹಸಿ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು - ಕರುಳಿನ ಏಳು ಹಸೀ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸಂಸೋನನು ಅವಳಿಗೆ, “ಅವರು ನನ್ನನ್ನು ಒಣಗದೆ ಇರುವ ಹಸುರಾದ ಏಳು ನಾರಿನ ಬರಲುಗಳಿಂದ ಕಟ್ಟಿದರೆ, ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು. ಅಧ್ಯಾಯವನ್ನು ನೋಡಿ |
ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.