ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.