Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:2 - ಪರಿಶುದ್ದ ಬೈಬಲ್‌

2 ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಒಂದಾನೊಂದು ದಿವಸ ತನ್ನ ತಾಯಿಗೆ - ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ; ಇಗೋ, ಆ ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು ಎಂದು ಹೇಳಲು ಆಕೆಯು - ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:2
21 ತಿಳಿವುಗಳ ಹೋಲಿಕೆ  

“ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣುಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ.


ಆಗ ಬೋವಜನು, “ಯುವತಿಯೇ, ಯೆಹೋವನು ನಿನಗೆ ದಯೆತೋರಲಿ. ನೀನು ನನ್ನ ಮೇಲೆ ತುಂಬಾ ಕರುಣೆಯನ್ನು ತೋರಿರುವೆ. ನೀನು ಮೊದಲು ನೊವೊಮಿಗೆ ತೋರಿದ ಕರುಣೆಗಿಂತಲೂ ಹೆಚ್ಚಿನ ಕರುಣೆಯನ್ನು ನನಗೆ ತೋರಿರುವೆ. ನೀನು ಒಬ್ಬ ತರುಣನನ್ನು ಅವನು ಬಡವನಾಗಿರಲಿ ಅಥವಾ ಶ್ರೀಮಂತನಾಗಿರಲಿ ಮದುವೆಗಾಗಿ ಆರಿಸಿಕೊಳ್ಳಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ.


ನೀವು ಅವನನ್ನು ಸ್ವಾಗತಿಸಿದರೆ ಅವನ ಕೆಟ್ಟಕಾರ್ಯಕ್ಕೆ ನೀವೂ ಸಹಾಯ ಮಾಡಿದಂತಾಗುವುದು.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


ಆಗ ಪೇತ್ರನು ಶಪಿಸಿಕೊಳ್ಳತೊಡಗಿ, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಯೇಸುವೆಂಬ ಮನುಷ್ಯನು ನನಗೆ ತಿಳಿದೇ ಇಲ್ಲ!” ಎಂದು ಹೇಳಿದನು. ಆ ಕೂಡಲೇ ಕೋಳಿ ಕೂಗಿತು.


ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು.


ಕೆಲವರು ತಮ್ಮ ತಂದೆತಾಯಿಗಳಿಂದ ಕದ್ದುಕೊಂಡು, “ಅದು ತಪ್ಪಲ್ಲ” ಎಂದು ಹೇಳುವರು. ಆದರೆ ಆ ವ್ಯಕ್ತಿಯು ಮನೆಯೊಳಗೆ ನುಗ್ಗಿ ಸರ್ವಸ್ವವನ್ನು ನಾಶಮಾಡುವ ವ್ಯಕ್ತಿಯಂತೆಯೇ ಕೆಟ್ಟವನಾಗಿದ್ದಾನೆ.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.


ಸೌಲನು, “ನೀವು ನನಗೆ ಸಹಾಯ ಮಾಡುತ್ತಿರುವುದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.


ಸೌಲನು ಸಮುವೇಲನ ಹತ್ತಿರಕ್ಕೆ ಹೋಗಿ, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಯೆಹೋವನ ಆಜ್ಞೆಗಳನ್ನು ಪಾಲಿಸಿದ್ದೇನೆ” ಎಂದು ಹೇಳಿದನು.


ಸೈನಿಕನೊಬ್ಬ ಯೋನಾತಾನನಿಗೆ, “‘ಈ ದಿನ ಸಾಯಂಕಾಲದೊಳಗೆ ಊಟಮಾಡುವವನು ಶಾಪಗ್ರಸ್ತನಾಗಲಿ’ ಎಂದು ನಿಮ್ಮ ತಂದೆ ಆಣೆಯಿಟ್ಟು ಹೇಳಿದ್ದಾನೆ ಆದಕಾರಣವೇ ಸೈನಿಕರು ಬಲಹೀನರಾಗಿದ್ದಾರೆ” ಎಂದು ತಿಳಿಸಿದನು.


ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ.


“ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.


“ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕ ಎಂಬ ಮನುಷ್ಯನಿದ್ದನು.


ಮೀಕನು ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ತನ್ನ ತಾಯಿಗೆ ಕೊಟ್ಟನು. ಆಗ ಅವಳು, “ನಾನು ಈ ಬೆಳ್ಳಿಯನ್ನು ಯೆಹೋವನಿಗೆ ವಿಶೇಷ ಹರಕೆಯಾಗಿ ಕೊಡುವೆನು. ಇದನ್ನು ನಾನು ನನ್ನ ಮಗನಿಗೆ ಕೊಡುವೆನು, ಅವನು ಅದರಿಂದ ಒಂದು ವಿಗ್ರಹವನ್ನು ಮಾಡಿಸಿ ಅದಕ್ಕೆ ಬೆಳ್ಳಿಯ ಹೊದಿಕೆಯನ್ನು ಹಾಕಿಸುವನು” ಎಂದು ಹೇಳಿ ಆ ಬೆಳ್ಳಿಯನ್ನು ಮಗನ ಕೈಯಲ್ಲಿ ಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು