Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:3 - ಪರಿಶುದ್ದ ಬೈಬಲ್‌

3 ಮೀಕನು ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ತನ್ನ ತಾಯಿಗೆ ಕೊಟ್ಟನು. ಆಗ ಅವಳು, “ನಾನು ಈ ಬೆಳ್ಳಿಯನ್ನು ಯೆಹೋವನಿಗೆ ವಿಶೇಷ ಹರಕೆಯಾಗಿ ಕೊಡುವೆನು. ಇದನ್ನು ನಾನು ನನ್ನ ಮಗನಿಗೆ ಕೊಡುವೆನು, ಅವನು ಅದರಿಂದ ಒಂದು ವಿಗ್ರಹವನ್ನು ಮಾಡಿಸಿ ಅದಕ್ಕೆ ಬೆಳ್ಳಿಯ ಹೊದಿಕೆಯನ್ನು ಹಾಕಿಸುವನು” ಎಂದು ಹೇಳಿ ಆ ಬೆಳ್ಳಿಯನ್ನು ಮಗನ ಕೈಯಲ್ಲಿ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಟ್ಟನು.ಆಕೆ, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ. ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುತ್ತೇನೆ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು - ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆ ಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:3
21 ತಿಳಿವುಗಳ ಹೋಲಿಕೆ  

“ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.


“ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!


ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”


ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ಈ ವಿಷಯ ಕೇಳು” ಎಂದು ಕೇಳಿಕೊಂಡರು.


ಮೀಕನು ತನ್ನೊಳಗೆ, “ಯೆಹೋವನು ನನಗೆ ಕೃಪೆ ತೋರುವನು. ಏಕೆಂದರೆ ನನ್ನ ಮನೆಯಲ್ಲಿ ಲೇವಿಕುಲದ ಒಬ್ಬನು ಯಾಜಕನಾಗಿದ್ದಾನೆ” ಎಂದುಕೊಂಡನು.


ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.


“ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ.


ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.


ಆದರೆ ಮೀಕನು ಆ ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಆ ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ಆ ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು.


ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು.


ನಿಮ್ಮಲ್ಲಿ ಬೆಳ್ಳಿಬಂಗಾರಗಳ ವಿಗ್ರಹಗಳಿವೆ. ಆ ಸುಳ್ಳುದೇವರುಗಳು ನಿಮ್ಮನ್ನು ಹೊಲೆಯನ್ನಾಗಿ ಮಾಡಿವೆ. ನೀವು ಅವುಗಳ ಸೇವೆಯನ್ನು ನಿಲ್ಲಿಸುವಿರಿ. ಅವು ಹೊಲಸು ವಸ್ತುಗಳೋ ಎಂಬಂತೆ ಅವುಗಳನ್ನೆತ್ತಿ ಬಿಸಾಡಿಬಿಡುವಿರಿ.


“‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಆ ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೊಮೋನನೊಂದಿಗೂ ಮಾತನಾಡಿ, “ನನ್ನ ಹೆಸರನ್ನು ಈ ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಈ ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ಮರಣೆಯು ಸದಾಕಾಲ ನಡಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು