ನ್ಯಾಯಸ್ಥಾಪಕರು 17:4 - ಪರಿಶುದ್ದ ಬೈಬಲ್4 ಆದರೆ ಮೀಕನು ಆ ಬೆಳ್ಳಿಯನ್ನು ತನ್ನ ತಾಯಿಗೆ ಹಿಂದಿರುಗಿಸಿದನು. ಅವಳು ಸುಮಾರು ಐದು ತೊಲೆಯಷ್ಟು ಬೆಳ್ಳಿಯ ನಾಣ್ಯಗಳನ್ನು ಒಬ್ಬ ಅಕ್ಕಸಾಲಿಗನಿಗೆ ಕೊಟ್ಟಳು. ಆ ಅಕ್ಕಸಾಲಿಗನು ಅದರಿಂದ ಒಂದು ವಿಗ್ರಹವನ್ನು ಮಾಡಿ ಅದಕ್ಕೆ ಬೆಳ್ಳಿಯ ಹೊದಿಕೆ ಹಾಕಲು ಉಪಯೋಗಿಸಿದನು. ಆ ವಿಗ್ರಹವನ್ನು ಮೀಕನ ಮನೆಯಲ್ಲಿ ಇಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮಗನು ಹಿಂದಕ್ಕೆ ಕೊಟ್ಟ ರೂಪಾಯಿಗಳಲ್ಲಿ ಇನ್ನೂರು ರೂಪಾಯಿಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು. ಅಧ್ಯಾಯವನ್ನು ನೋಡಿ |