Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:7 - ಪರಿಶುದ್ದ ಬೈಬಲ್‌

7 ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೆತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದದ ಬೇತ್ಲೆಹೇಮಿನವನೂ, ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು ಉಪಜೀವನಕ್ಕೆ ಅನುಕೂಲವಾಗುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಹೂದದ ಬೆತ್ಲೆಹೇಮಿನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದದ ಬೇತ್ಲೆಹೇವಿುನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೂದದ ಬೇತ್ಲೆಹೇಮಿನವನಾದ ಯೆಹೂದದ ಗೋತ್ರದ ಲೇವಿಯನಾದಂಥ ಒಬ್ಬ ಪ್ರಾಯದವನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:7
10 ತಿಳಿವುಗಳ ಹೋಲಿಕೆ  

ಹೆರೋದನು ರಾಜನಾಗಿದ್ದ ಕಾಲದಲ್ಲಿ ಯೇಸು ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟಿದನು. ಯೇಸು ಹುಟ್ಟಿದ ಮೇಲೆ, ಪೂರ್ವದೇಶದ ಕೆಲವು ಜ್ಞಾನಿಗಳು ಜೆರುಸಲೇಮಿಗೆ ಬಂದರು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲ್ಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಈ ಸೀಮೆಯಲ್ಲಿ ಸೇರಿವೆ.


ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.


ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,


ಯೆಫ್ತಾಹನ ತರುವಾಯ ಇಬ್ಜಾನ ಎಂಬವನು ಇಸ್ರೇಲರ ನ್ಯಾಯಾಧೀಶನಾಗಿದ್ದನು. ಇಬ್ಜಾನನು ಬೆತ್ಲೆಹೇಮ್ ನಗರದವನು.


ಬಲಶಾಲಿಯಾದ ನಗರಿಯೇ, ನಿನ್ನ ಸೈನಿಕರನ್ನು ಕೂಡಿಸು. ಅವರು ನಮ್ಮ ಮೇಲೆ ದಾಳಿಮಾಡಲು ಸುತ್ತುವರಿದಿದ್ದಾರೆ. ಇಸ್ರೇಲಿನ ನ್ಯಾಯಾಧೀಶನ ಕೆನ್ನೆಯ ಮೇಲೆ ಕೋಲಿನಿಂದ ಹೊಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು