Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:17 - ಪರಿಶುದ್ದ ಬೈಬಲ್‌

17-18 ಆ ಐದು ಜನ ಗೂಢಚಾರರು ಮನೆಯೊಳಗೆ ಪ್ರವೇಶ ಮಾಡಿದರು. ಯಾಜಕನು ಹೊರಗೆ ಬಾಗಿಲ ಬಳಿಯಲ್ಲಿ ಯುದ್ಧ ಸನ್ನದ್ಧರಾದ ಆರುನೂರು ಜನರ ಸಂಗಡ ನಿಂತಿದ್ದನು. ಆಗ ಆ ಐದು ಮಂದಿ ಮನೆಯೊಳಗೆ ಹೋಗಿ ಕೆತ್ತನೆಯ ವಿಗ್ರಹವನ್ನೂ ಏಫೋದನ್ನೂ ಬೆಳ್ಳಿವಿಗ್ರಹಗಳನ್ನೂ ಗೃಹದೇವತೆಗಳ ವಿಗ್ರಹಗಳನ್ನೂ ತೆಗೆದುಕೊಂಡರು. ಅವರನ್ನು ಕಂಡ ತರುಣ ಲೇವಿಯು, “ನೀವು ಏನು ಮಾಡುತ್ತಿದ್ದೀರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ‘ಏಫೋದ’ನ್ನೂ ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಜಕನೂ ಬಂದು ಇವರೊಡನೆ ಬಾಗಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ಏಫೋದನ್ನೂ ದೇವತಾ ಪ್ರತಿಮೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:17
19 ತಿಳಿವುಗಳ ಹೋಲಿಕೆ  

ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡಲು ಹೋಗಿದ್ದ ಐದು ಜನರು ತಮ್ಮ ಬಂಧುಗಳಿಗೆ, “ಇಲ್ಲಿಯ ಒಂದು ಮನೆಯಲ್ಲಿ ಏಫೋದ್ ಇದೆ; ಮನೆದೇವರುಗಳೂ ಇವೆ. ಕೆತ್ತಿ ಮಾಡಿರುವ ಒಂದು ವಿಗ್ರಹವೂ ಇದೆ. ಈಗ ನೀವು ಹೋಗಿ ಅವುಗಳನ್ನು ತೆಗೆದುಕೊಂಡು ಬನ್ನಿರಿ” ಎಂದು ಹೇಳಿದರು.


ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.


ನಿನ್ನ ವಿಗ್ರಹಗಳನ್ನೂ ಕಲ್ಲುಕಂಬಗಳನ್ನೂ ಒಡೆದು ನಾಶಮಾಡುವೆನು. ನಿನ್ನ ಕೈಗಳು ಮಾಡಿದ ವಸ್ತುಗಳನ್ನು ನೀನು ಪೂಜಿಸುವುದಿಲ್ಲ.


ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.


ದೇವರ ಪವಿತ್ರ ಪೆಟ್ಟಿಗೆಯು ಫಿಲಿಷ್ಟಿಯರ ವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರನ್ನು ಅವರು ಕೊಂದರು.


ತನ್ನ ಸುತ್ತಲೂ ನಿಂತಿದ್ದ ಜನರಿಗೆ ಯೋವಾಷನು, “ನೀವು ಬಾಳನ ಪಕ್ಷವನ್ನು ವಹಿಸುವಿರಾ? ನೀವು ಬಾಳನನ್ನು ರಕ್ಷಿಸುವಿರಾ? ಬಾಳನ ಪಕ್ಷದವರನ್ನು ಬೆಳಗಾಗುವುದರೊಳಗೆ ಕೊಂದು ಬಿಡಲಾಗುವುದು. ಬಾಳನು ನಿಜವಾಗಿಯೂ ದೇವರಾಗಿದ್ದರೆ ಅವನ ಯಜ್ಞವೇದಿಕೆಯನ್ನು ಬೀಳಿಸುವಾಗ ಅವನು ತನ್ನ ರಕ್ಷಣೆಯನ್ನು ಏಕೆ ಮಾಡಿಕೊಳ್ಳಲಿಲ್ಲ?” ಅಂದನು.


ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.


ಆ ಸಮಯದಲ್ಲಿ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅವನು ಇಲ್ಲದಿದ್ದಾಗ, ರಾಹೇಲಳು ಅವನ ಮನೆಯೊಳಗೆ ಹೋಗಿ, ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ?” ಎಂದು ಹೇಳಿದನು.


ದಾನ್ಯರ ಆರುನೂರು ಜನರು ಪುರದ್ವಾರದಲ್ಲಿ ನಿಂತಿದ್ದರು. ಅವರು ಆಯುಧಗಳನ್ನು ಹಿಡಿದುಕೊಂಡು ಯುದ್ಧ ಸನ್ನದ್ಧರಾಗಿದ್ದರು.


ಮೀಕಲಳು ಮನೆಯಲ್ಲಿದ್ದ ವಿಗ್ರಹವನ್ನು ಹಾಸಿಗೆಯ ಮೇಲೆ ಇಟ್ಟು ಅದಕ್ಕೆ ಬಟ್ಟೆಗಳನ್ನು ತೊಡಿಸಿ ಅದರ ತಲೆಗೆ ಹೋತದ ಕೂದಲನ್ನೂ ಅಂಟಿಸಿದಳು.


ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ.


ಇದರ ಅರ್ಥವೇನೆಂದರೆ, ರಸ್ತೆಯು ಶಾಖೆಗಳಾಗಿ ಒಡೆಯುವ ಸ್ಥಳದಲ್ಲಿ ಬಾಬಿಲೋನಿನ ರಾಜನು ಶಕುನವನ್ನು ಕೇಳಲು ನಿಂತಿದ್ದಾನೆ. ಅವನು ಕೆಲವು ಬಾಣಗಳನ್ನು ಅಲುಗಾಡಿಸಿದ್ದಾನೆ. ಅವನು ಕೆಲವು ಬಾಣಗಳನ್ನು ಚದರಿಸಿ, ತನ್ನ ವಂಶದ ವಿಗ್ರಹಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು, ಮತ್ತು ತಾನು ಕೊಂದ ಪ್ರಾಣಿಯ ಕಾಳಿಜವನ್ನು ನೋಡಿದನು.


ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು