Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:2 - ಪರಿಶುದ್ದ ಬೈಬಲ್‌

2 ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದುಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ (ಲಯಿಷ್) ದೇಶವನ್ನು ಸಂಚರಿಸಿ ನೋಡಿ ಬನ್ನಿ,” ಎಂದು ಆಜ್ಞಾಪಿಸಿ ಕಳುಹಿಸಿದನರು . ಇವರು ಪ್ರಯಾಣ ಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮ ಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ - ನೀವು ಹೋಗಿ [ಲಯಿಷ್] ದೇಶವನ್ನು ಸಂಚರಿಸಿ ನೋಡಿರಿ ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದಾನರು ದೇಶವನ್ನು ಸಂಚರಿಸಿ ನೋಡಿ, ಪರಿಶೋಧಿಸುವುದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ, ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿಯನ್ನು ಕರೆದು, ಅವರ ಸಂಗಡ, “ನೀವು ಹೋಗಿ ದೇಶವನ್ನು ಸಂಚರಿಸಿ ನೋಡಿರಿ,” ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದು ಅಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:2
20 ತಿಳಿವುಗಳ ಹೋಲಿಕೆ  

ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ಈ ನಗರವು ಚೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ.


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ದಾನ್ ಕುಲದವರ ಆರುನೂರು ಜನರು ಚೊರ್ಗಾ ಮತ್ತು ಎಷ್ಟಾವೋಲ್ ನಗರಗಳಿಂದ ಹೊರಟರು. ಅವರು ಯುದ್ಧ ಸನ್ನದ್ಧರಾಗಿದ್ದರು.


ಆ ಐದು ಜನರು ಚೊರ್ಗಾ, ಎಷ್ಟಾವೋಲ್ ನಗರಗಳಿಗೆ ಹಿಂತಿರುಗಿಹೋದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಕೇಳಿದರು.


ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ


“ಒಬ್ಬ ಅರಸನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವಾಗ, ಮೊದಲು ಅವನು ಕುಳಿತುಕೊಂಡು ಯೋಜನೆ ಮಾಡುವನು. ಅರಸನ ಬಳಿಯಲ್ಲಿ ಕೇವಲ ಹತ್ತುಸಾವಿರ ಮಂದಿ ಸೈನಿಕರಿದ್ದರೆ, ಇಪ್ಪತ್ತುಸಾವಿರ ಮಂದಿ ಸೈನಿಕರಿರುವ ಇನ್ನೊಬ್ಬ ಅರಸನನ್ನು ಸೋಲಿಸಲು ತನಗೆ ಸಾಧ್ಯವೇ ಎಂದು ಆಲೋಚಿಸುವನು.


ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.


ಅದಕ್ಕೆ ಲೇವಿಯು, “ನಾವು ಯೆಹೂದದ ಬೆತ್ಲೆಹೇಮಿನಿಂದ ಹೊರಟಿದ್ದೇವೆ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ಮನೆಗೆ ಹೋಗುತ್ತಿದ್ದೇವೆ. ಆದರೆ ಈ ರಾತ್ರಿ ಇಲ್ಲಿ ತಂಗಲು ಯಾರೂ ನಮ್ಮನ್ನು ತಮ್ಮ ಮನೆಗೆ ಆಹ್ವಾನಿಸಲಿಲ್ಲ. ನಾನು ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ. ಈಗ ನಾನು ನಮ್ಮ ಮನೆಗೆ ಹೋಗುತ್ತಿದ್ದೇನೆ.


ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.


ಸಂಸೋನನ ಸಹೋದರರು ಮತ್ತು ಅವನ ತಂದೆಯ ಕುಟುಂಬದವರೆಲ್ಲರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಅವನ ತಂದೆಯ ಹೆಸರು ಮಾನೋಹ. ಆ ಸಮಾಧಿಯು ಚೊರ್ಗಕ್ಕೂ ಮತ್ತು ಎಷ್ಟಾವೋಲಿಗೂ ಮಧ್ಯದಲ್ಲಿದೆ. ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.


ಚೊರ್ಗಾ ನಗರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಮಾನೋಹ, ಅವನು ದಾನ್ ಕುಲದವನಾಗಿದ್ದನು. ಮಾನೋಹನಿಗೆ ಒಬ್ಬ ಹೆಂಡತಿಯಿದ್ದಳು. ಆದರೆ ಅವಳು ಬಂಜೆಯಾಗಿದ್ದಳು.


ಅವರಿಗೆ ಕೊಟ್ಟ ಊರುಗಳು: ಚೊರ್ಗಾ, ಎಷ್ಟಾವೋಲ್, ಈರ್ಷೆಮೆಷ್,


ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು.


ಯೆಹೂದ ಕುಲದವರು ಪಶ್ಚಿಮ ದಿಕ್ಕಿನ ಇಳಕಲಿನ ಪ್ರದೇಶದಲ್ಲಿಯೂ ಕೆಲವು ಊರುಗಳನ್ನು ಪಡೆದಿದ್ದರು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಎಷ್ಟಾವೋಲ್, ಚೊರ್ಗಾ, ಅಶ್ನಾ,


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕ ಎಂಬ ಮನುಷ್ಯನಿದ್ದನು.


ಆ ಐದು ಜನರು ಮೀಕನ ಮನೆಯ ಸಮೀಪಕ್ಕೆ ಬಂದಾಗ ತರುಣನಾಗಿದ್ದ ಲೇವಿಯ ಧ್ವನಿಯನ್ನು ಕೇಳಿ ಗುರುತಿಸಿದರು. ಆದ್ದರಿಂದ ಅವರು ಮೀಕನ ಮನೆಯಲ್ಲಿ ಇಳಿದುಕೊಂಡು ಆ ತರುಣನಿಗೆ, “ನಿನ್ನನ್ನು ಇಲ್ಲಿಗೆ ಯಾರು ಕರೆದುತಂದರು? ನೀನು ಇಲ್ಲಿ ಏನು ಮಾಡುತ್ತಿರುವೆ? ಇಲ್ಲಿ ನಿನ್ನ ಉದ್ಯೋಗವೇನು?” ಎಂದು ಕೇಳಿದರು.


ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು.


ಅಲ್ಲಿಂದ ಆ ಆರುನೂರು ಮಂದಿ ಎಫ್ರಾಯೀಮಿನ ಬೆಟ್ಟಪ್ರದೇಶಕ್ಕೆ ಪ್ರಯಾಣಮಾಡಿ ಮೀಕನ ಮನೆಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು