Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:23 - ಪರಿಶುದ್ದ ಬೈಬಲ್‌

23 ಅವರು ದಾನ್ಯರನ್ನು ಬೆನ್ನಟ್ಟಿಕೊಂಡು ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂತಿರುಗಿ ನೋಡಿ ಮೀಕನಿಗೆ, “ನಿನಗೇನಾಗಿದೆ? ಏಕೆ ಕೂಗಿಕೊಳ್ಳುತ್ತಿರುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪುಕೂಡಿಸಿಕೊಂಡು ಬಂದದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ - ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದಾನರು ತಮ್ಮ ಮುಖ ತಿರುಗಿಸಿ ಮೀಕನಿಗೆ, “ನೀನು ಗುಂಪು ಕೂಡಿಕೊಂಡು ಬರಲು ನಿನಗೆ ಏನಾಯಿತು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:23
8 ತಿಳಿವುಗಳ ಹೋಲಿಕೆ  

ದಿವ್ಯದರ್ಶನದ ಕಣಿವೆಯ ವಿಷಯವಾಗಿ ದುಃಖದ ಸಂದೇಶ: ಜನಗಳೇ, ನಿಮಗೆ ಏನಾಯಿತು? ನಿಮ್ಮ ಮನೆ ಮಾಳಿಗೆಯ ಮೇಲೆ ಯಾಕೆ ಅಡಗಿರುತ್ತೀರಿ?


ಕೆಂಪು ಸಮುದ್ರವೇ, ನೀನೇಕೆ ಓಡಿಹೋದೆ? ಜೋರ್ಡನ್ ನದಿಯೇ ನೀನೇಕೆ ಹಿಂತಿರುಗಿ ಓಡಿಹೋದೆ?


ನಂತರ ಇಸ್ರೇಲಿನ ರಾಜನು ಆ ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಆ ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಈ ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.


ರಾಜನಾದ ದಾವೀದನು ಅವಳಿಗೆ, “ನಿನ್ನ ಸಮಸ್ಯೆ ಏನು?” ಎಂದು ಕೇಳಿದನು. ಆ ಸ್ತ್ರೀಯು, “ನಾನೊಬ್ಬ ವಿಧವೆ. ನನ್ನ ಗಂಡನು ತೀರಿಕೊಂಡಿದ್ದಾನೆ.


ಸೌಲನು ಹಸುಗಳನ್ನು ಹೊಡೆದುಕೊಂಡು ಹೊಲಕ್ಕೆ ಹೋಗಿದ್ದನು. ಸೌಲನು ಹೊಲದಿಂದ ಬಂದಾಗ ಜನರೆಲ್ಲ ಅಳುವುದು ಕೇಳಿಸಿತು. ಸೌಲನು, “ಏನಾಯಿತು? ಜನರು ಅಳುತ್ತಿರುವುದೇಕೆ?” ಎಂದು ಕೇಳಿದನು. ಆಗ ಜನರೆಲ್ಲ ಯಾಬೇಷಿನ ಸಂದೇಶಕರು ಹೇಳಿದ್ದನ್ನೆಲ್ಲ ಸೌಲನಿಗೆ ತಿಳಿಸಿದರು.


ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.


ಆ ಸ್ಥಳದಿಂದ ದಾನ್ಯರು ಬಹುದೂರ ಹೋದರು. ಮೀಕನೂ ಅವನ ನೆರೆಹೊರೆಯವರೆಲ್ಲರೂ ಒಂದೆಡೆ ಸೇರಿದರು.


ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು