27 ಮೀಕನು ಮಾಡಿಸಿದ ವಿಗ್ರಹಗಳನ್ನು ದಾನ್ಯರು ತೆಗೆದುಕೊಂಡರು. ಅವರು ಮೀಕನ ಜೊತೆಗಿದ್ದ ಯಾಜಕನನ್ನು ಸಹ ತೆಗೆದುಕೊಂಡು ಹೋದರು. ಅವರು ಲಯಿಷಿಗೆ ಬಂದು ಅಲ್ಲಿನ ಜನರ ಮೇಲೆ ಧಾಳಿಮಾಡಿದರು. ಆ ಜನರು ಶಾಂತಿಯಿಂದ ಇದ್ದರು. ಅವರು ಧಾಳಿಯನ್ನು ನಿರೀಕ್ಷಿಸಿರಲಿಲ್ಲ. ದಾನ್ಯರು ತಮ್ಮ ಖಡ್ಗಗಳಿಂದ ಆ ಜನರನ್ನು ಕೊಂದುಹಾಕಿದರು. ಆಮೇಲೆ ಆ ನಗರವನ್ನು ಸುಟ್ಟುಬಿಟ್ಟರು.
27 ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.
27 ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು, ಲಯಿಷಿಗೆ ಹೋಗಿ, ಅಲ್ಲಿ ಸುಖದಿಂದಲೂ ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು ಅವರನ್ನು ಕತ್ತಿಯಿಂದ ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟರು.
27 ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು ಅವರನ್ನು ಕತ್ತಿಯಿಂದ ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟರು.
27 ಅವರು ಮೀಕನು ಮಾಡಿಕೊಂಡವುಗಳನ್ನೂ, ಅವನಿಗಿದ್ದ ಯಾಜಕನನ್ನೂ ತೆಗೆದುಕೊಂಡು ವಿಶ್ರಾಂತಿಯಿಂದಲೂ, ಭರವಸದಿಂದಲೂ ಇದ್ದ ಲಯಿಷಿನ ಜನರ ಮೇಲೆ ಬಂದು, ಅವರನ್ನು ಖಡ್ಗದಿಂದ ಹೊಡೆದು, ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.
ದಾನ್‌ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವಲ್ಲಿ ಕಷ್ಟಪಡಬೇಕಾಯಿತು. ಅಲ್ಲಿ ಅವರಿಗೆ ಬಲಿಷ್ಠರಾದ ವೈರಿಗಳಿದ್ದರು. ದಾನ್ ಕುಲದವರು ಅವರನ್ನು ಸುಲಭವಾಗಿ ಸೋಲಿಸಲಾಗಲಿಲ್ಲ. ಆದ್ದರಿಂದ ಅವರು ಲೆಷೆಮ್ ಜನರೊಡನೆ ಯುದ್ಧಮಾಡಿ ಅವರನ್ನು ಸಂಹರಿಸಿ ಲೆಷೆಮ್ ಪಟ್ಟಣದಲ್ಲಿ ನೆಲೆಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.
ನೀವು ಆ ಸ್ಥಳಕ್ಕೆ ಬಂದಮೇಲೆ ಅಲ್ಲಿ ಸಾಕಷ್ಟು ಭೂಮಿ ಇದೆ ಎಂಬುದನ್ನು ಅರಿತುಕೊಳ್ಳುತ್ತೀರಿ. ಅಲ್ಲಿ ಎಲ್ಲವೂ ಸಮೃದ್ಧಿಕರವಾಗಿದೆ. ಅಲ್ಲಿಯ ಜನರಿಗೆ ಶತ್ರುಗಳು ಧಾಳಿ ಮಾಡಬಹುದೆಂಬ ಭಯವೇ ಇಲ್ಲ. ಖಂಡಿತವಾಗಿಯೂ ದೇವರು ಆ ಭೂಮಿಯನ್ನು ನಮಗೆ ಕೊಟ್ಟಿದ್ದಾನೆ” ಎಂದು ಉತ್ತರಿಸಿದರು.
ಗಿದ್ಯೋನ ಮತ್ತು ಅವನ ಸೈನಿಕರು ಕಾಡುಗೊಲ್ಲರ ಪ್ರದೇಶದ ಮಾರ್ಗವನ್ನು ಬಳಸಿದರು. ಆ ಮಾರ್ಗವು ನೋಬಹ, ಯೊಗ್ಬೆಹಾ ನಗರಗಳ ಪೂರ್ವಕ್ಕೆ ಇದೆ. ಗಿದ್ಯೋನನು ಕರ್ಕೋರ ನಗರಕ್ಕೆ ಬಂದು ಶತ್ರುಗಳ ಮೇಲೆ ಧಾಳಿ ಮಾಡಿದನು. ಶತ್ರುಸೈನ್ಯವು ಈ ಧಾಳಿಯನ್ನು ನಿರೀಕ್ಷಿಸಿರಲಿಲ್ಲ.