ನ್ಯಾಯಸ್ಥಾಪಕರು 18:28 - ಪರಿಶುದ್ದ ಬೈಬಲ್28 ಲಯಿಷಿನಲ್ಲಿ ವಾಸಮಾಡುತ್ತಿದ್ದ ಜನರನ್ನು ರಕ್ಷಿಸುವವರು ಯಾರೂ ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹುದೂರದಲ್ಲಿದ್ದ ಕಾರಣ ಅವರೂ ಬರುವಂತಿರಲಿಲ್ಲ. ಲಯಿಷಿನವರು ಆರಾಮಿನ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಂಡಿರಲಿಲ್ಲ. ಹೀಗಾಗಿ ಅವರೂ ಸಹಾಯಕ್ಕೆ ಬರಲಿಲ್ಲ. ಬೇತ್‌ರೆಹೋಬಿನ ಕಣಿವೆಯಲ್ಲಿದ್ದ ಈ ನಗರವನ್ನು ದಾನ್ಯರು ಹೊಸದಾಗಿ ಕಟ್ಟಿದರು. ಆ ನಗರವು ಅವರ ವಾಸಸ್ಥಾನವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆ ಪಟ್ಟಣ ಚೀದೋನಿಗೆ ದೂರವಾಗಿದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯ ದೊರಕಲಿಲ್ಲ. ಬೇತ್ ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರುಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆ ಪಟ್ಟಣವು ಚೀದೋನಿಗೆ ದೂರವಾಗಿದ್ದದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯದೊರಕಲಿಲ್ಲ. ಬೇತ್ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರಿಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದು ಸೀದೋನಿಗೆ ದೂರವಾಗಿದ್ದುದರಿಂದಲೂ, ಯಾವ ಮನುಷ್ಯನ ಸಂಗಡಲಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ಅವರನ್ನು ಕಾಪಾಡಲು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸಮೀಪವಾದ ತಗ್ಗಿನಲ್ಲಿ ಇತ್ತು. ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿ |
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.