ನ್ಯಾಯಸ್ಥಾಪಕರು 18:3 - ಪರಿಶುದ್ದ ಬೈಬಲ್3 ಆ ಐದು ಜನರು ಮೀಕನ ಮನೆಯ ಸಮೀಪಕ್ಕೆ ಬಂದಾಗ ತರುಣನಾಗಿದ್ದ ಲೇವಿಯ ಧ್ವನಿಯನ್ನು ಕೇಳಿ ಗುರುತಿಸಿದರು. ಆದ್ದರಿಂದ ಅವರು ಮೀಕನ ಮನೆಯಲ್ಲಿ ಇಳಿದುಕೊಂಡು ಆ ತರುಣನಿಗೆ, “ನಿನ್ನನ್ನು ಇಲ್ಲಿಗೆ ಯಾರು ಕರೆದುತಂದರು? ನೀನು ಇಲ್ಲಿ ಏನು ಮಾಡುತ್ತಿರುವೆ? ಇಲ್ಲಿ ನಿನ್ನ ಉದ್ಯೋಗವೇನು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತಾಡುವುದನ್ನು ಕೇಳಿ ಗುರುತು ಹಿಡಿದು ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತಿರುವೆ? ಏನು ಸಂಬಳ ಸಿಕ್ಕುತ್ತಿದೆ?” ಎಂದು ಅವನನ್ನು ವಿಚಾರಿಸಿದರು. ಅವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತಾಡುವದನ್ನು ಕೇಳಿ ಗುರುತುಹಿಡಿದು ಅವನ ಬಳಿಗೆ ಹೋಗಿ - ನಿನ್ನನ್ನು ಇಲ್ಲಿಗೆ ಕರತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ ಎಂದು ಅವನನ್ನು ಕೇಳಲು ಅವನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ಮೀಕನ ಮನೆಯ ಬಳಿಯಲ್ಲಿರುವಾಗ, ಲೇವಿಯ ಯುವಕನ ಸ್ವರ ಗುರುತಿಸಿ, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆದುಕೊಂಡು ಬಂದವನು ಯಾರು? ಇಲ್ಲಿ ನೀನು ಏನು ಮಾಡುತ್ತೀ? ಏಕೆ ನೀನು ಇಲ್ಲಿರುವೆ?” ಎಂದರು. ಅಧ್ಯಾಯವನ್ನು ನೋಡಿ |
ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಚರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು “ಸಿಬ್ಬೋಲೆತ್” ಎಂದು ಉಚ್ಚರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.
ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.