ನ್ಯಾಯಸ್ಥಾಪಕರು 18:30 - ಪರಿಶುದ್ದ ಬೈಬಲ್30 ದಾನ್ಯರು ದಾನ್ ನಗರದಲ್ಲಿ ಆ ವಿಗ್ರಹಗಳನ್ನು ಪ್ರತಿಷ್ಠಾಪಿಸಿದರು. ಅವರು ಗೇರ್ಷೋಮನ ಮಗನಾದ ಯೆಹೋನಾತಾನನನ್ನು ತಮ್ಮ ಯಾಜಕನನ್ನಾಗಿ ಮಾಡಿಕೊಂಡರು. ಗೇರ್ಷೋಮನು ಮೋಶೆಯ ಮಗನಾಗಿದ್ದನು. ಇಸ್ರೇಲರನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗುವವರೆಗೆ ಯೆಹೋನಾತಾನನು ಮತ್ತು ಅವನ ಮಕ್ಕಳು ದಾನ್ಯರ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲ್ಯರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅಲ್ಲಿ ದಾನ್ಯರು ಕೆತ್ತಿದ ವಿಗ್ರಹವನ್ನು ತಮಗಾಗಿ ಸ್ಥಾಪಿಸಿಕೊಂಡರು. ಇಸ್ರಾಯೇಲರು ಸೆರೆಯಾಗಿ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ಅವನ ಮಕ್ಕಳೂ ದಾನನ ಗೋತ್ರದವರಿಗೆ ಯಾಜಕರಾಗಿದ್ದರು. ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.