ನ್ಯಾಯಸ್ಥಾಪಕರು 18:6 - ಪರಿಶುದ್ದ ಬೈಬಲ್6 ಆ ಯಾಜಕನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮಗೆ ಮಾರ್ಗದರ್ಶನ ಮಾಡುತ್ತಾನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನು, “ಸಮಾಧಾನದಿಂದ ಹೋಗಿ ಸರ್ವೇಶ್ವರ ನಿಮ್ಮ ಪ್ರಯಾಣವನ್ನು ಆಶೀರ್ವದಿಸುವರು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು - ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ಯಾಜಕನು, “ಸಮಾಧಾನವಾಗಿ ಹೋಗಿರಿ. ನೀವು ಹೋಗುವ ನಿಮ್ಮ ಮಾರ್ಗಕ್ಕೆ ಯೆಹೋವ ದೇವರ ಒಪ್ಪಿಗೆ ಇದೆ,” ಎಂದನು. ಅಧ್ಯಾಯವನ್ನು ನೋಡಿ |
ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.