Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:7 - ಪರಿಶುದ್ದ ಬೈಬಲ್‌

7 ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಐದು ಮಂದಿ ಹೊರಟು ಲಯಿಷಿಗೆ ಬಂದು - ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ತಗ್ಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬದನ್ನು ತಿಳಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:7
13 ತಿಳಿವುಗಳ ಹೋಲಿಕೆ  

ದಾನ್‌ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವಲ್ಲಿ ಕಷ್ಟಪಡಬೇಕಾಯಿತು. ಅಲ್ಲಿ ಅವರಿಗೆ ಬಲಿಷ್ಠರಾದ ವೈರಿಗಳಿದ್ದರು. ದಾನ್ ಕುಲದವರು ಅವರನ್ನು ಸುಲಭವಾಗಿ ಸೋಲಿಸಲಾಗಲಿಲ್ಲ. ಆದ್ದರಿಂದ ಅವರು ಲೆಷೆಮ್ ಜನರೊಡನೆ ಯುದ್ಧಮಾಡಿ ಅವರನ್ನು ಸಂಹರಿಸಿ ಲೆಷೆಮ್ ಪಟ್ಟಣದಲ್ಲಿ ನೆಲೆಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.


ಅವಳು ತನ್ನನ್ನು ಘನಪಡಿಸಿಕೊಂಡು ವೈಭವದಿಂದ ಜೀವಿಸಿದಳು. ಆದ್ದರಿಂದ ಅದಕ್ಕೆ ತಕ್ಕಂತೆ ಸಂಕಟವನ್ನೂ ದುಃಖವನ್ನೂ ಅವಳಿಗೆ ಬರಮಾಡಿರಿ. ‘ನಾನು ನನ್ನ ಸಿಂಹಾಸನದ ಮೇಲೆ ಕುಳಿತಿರುವ ರಾಣಿ. ನಾನು ವಿಧವೆಯಲ್ಲ, ನಾನು ಎಂದೆಂದಿಗೂ ದುಃಖಿಸುವುದಿಲ್ಲ’ ಎಂದು ಅವಳು ತನಗೆ ತಾನೇ ಹೇಳಿಕೊಳ್ಳುತ್ತಾಳೆ.


ರಾಜನು ಕಳುಹಿಸುವ ಅಧಿಕಾರಿಗಳಿಗೆ ವಿಧೇಯರಾಗಿರಿ. ತಪ್ಪು ಮಾಡಿದವರನ್ನು ದಂಡಿಸಲೂ ಒಳ್ಳೆಯದನ್ನು ಮಾಡಿದವರನ್ನು ಹೊಗಳಲೂ ಅವರನ್ನು ಕಳುಹಿಸಲಾಗಿದೆ.


ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು.


ರಾಜನಾದ ದಾವೀದನು ತನ್ನ ಮಗನಾದ ಅದೋನೀಯನನ್ನು ಎಂದೂ ತಿದ್ದಲಿಲ್ಲ. ದಾವೀದನು, “ನೀನು ಹೀಗೇಕೆ ಮಾಡುತ್ತಿರುವೆ?” ಎಂದು ಅವನನ್ನು ಒಂದು ಸಾರಿಯಾದರೂ ಕೇಳಲಿಲ್ಲ. ಅದೋನೀಯನು ಅಬ್ಷಾಲೋಮನ ಬಳಿಕ ಹುಟ್ಟಿದ ಮಗ. ಅದೋನೀಯನು ಬಹಳ ಸುಂದರನಾಗಿದ್ದನು.


ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.


ಆ ಯಾಜಕನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮಗೆ ಮಾರ್ಗದರ್ಶನ ಮಾಡುತ್ತಾನೆ” ಎಂದು ಉತ್ತರಿಸಿದನು.


ಆ ಐದು ಜನರು ಚೊರ್ಗಾ, ಎಷ್ಟಾವೋಲ್ ನಗರಗಳಿಗೆ ಹಿಂತಿರುಗಿಹೋದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಕೇಳಿದರು.


ದಾನ್ಯರು ಆ ನಗರಕ್ಕೆ ಒಂದು ಹೊಸ ಹೆಸರನ್ನು ಕೊಟ್ಟರು. ಹಿಂದೆ ಅದರ ಹೆಸರು ಲಯಿಷ್ ಎಂದಿತ್ತು. ಆದರೆ ಅವರು ಅದಕ್ಕೆ ದಾನ್ ಎಂದು ಹೆಸರಿಟ್ಟರು. ಅವರು ತಮ್ಮ ಪೂರ್ವಿಕನಾದ ದಾನನ ಸ್ಮರಣಾರ್ಥವಾಗಿ ಆ ಹೆಸರನ್ನಿಟ್ಟರು. ದಾನನು ಇಸ್ರೇಲನ ಮಕ್ಕಳಲ್ಲಿ ಒಬ್ಬನು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ಅಲ್ಲಿ ಫಲವತ್ತಾದ ಭೂಮಿಯನ್ನೂ ಹಸಿರು ಹುಲ್ಲುಗಾವಲನ್ನೂ ಕಂಡು ಅಲ್ಲಿಯೇ ನೆಲೆಸಿದರು. ಆ ಪ್ರದೇಶವು ಪ್ರಶಾಂತವಾಗಿತ್ತು. ಹಿಂದಿನ ಕಾಲದಲ್ಲಿ ಹಾಮನ ಸಂತತಿಯವರು ಅಲ್ಲಿ ನೆಲೆಸಿದ್ದರು.


“ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ. ಅದು ತನ್ನ ರಕ್ಷಣೆಗಾಗಿ ಒಂದು ಕೋಟೆಯನ್ನಾಗಲಿ ಒಂದು ಬಾಗಿಲನ್ನಾಗಲಿ ಹೊಂದಿಲ್ಲ. ಆ ಜನರು ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಆ ಜನಾಂಗದ ಮೇಲೆ ಧಾಳಿ ಮಾಡಿರಿ.” ಎಂದು ಯೆಹೋವನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು