ನ್ಯಾಯಸ್ಥಾಪಕರು 18:8 - ಪರಿಶುದ್ದ ಬೈಬಲ್8 ಆ ಐದು ಜನರು ಚೊರ್ಗಾ, ಎಷ್ಟಾವೋಲ್ ನಗರಗಳಿಗೆ ಹಿಂತಿರುಗಿಹೋದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿ ಇರುವ ತಮ್ಮ ಬಂಧುಗಳ ಬಳಿಗೆ ಬಂದರು. ಆ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಅವರನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು - ನೀವು ಯಾವ ವರ್ತಮಾನ ತಂದಿದ್ದೀರಿ ಎಂದು ಅವರನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರುಗಿ ಬಂದರು. ಅವರ ಸಹೋದರರಾದ ದಾನರು ಅವರಿಗೆ, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದರು. ಅಧ್ಯಾಯವನ್ನು ನೋಡಿ |
ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.