ನ್ಯಾಯಸ್ಥಾಪಕರು 19:1 - ಪರಿಶುದ್ದ ಬೈಬಲ್1 ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿ ಒಬ್ಬಾನೊಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇವಿುನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅಧ್ಯಾಯವನ್ನು ನೋಡಿ |
ಮುಸ್ಸಂಜೆಯ ಸಮಯದಲ್ಲಿ ಕನ್ಯೆಯು ರಾಜನಿವಾಸವನ್ನು ಪ್ರವೇಶಿಸುವಳು. ಮರುದಿವಸ ಮುಂಜಾನೆ ಆಕೆಯು ಅಲ್ಲಿಂದ ಹಿಂತಿರುಗಿ ರಾಜನ ಉಪಪತ್ನಿಯರು ಉಳಿದುಕೊಳ್ಳುವ ಅಂತಃಪುರದ ಇನ್ನೊಂದು ಭಾಗದಲ್ಲಿ ನೆಲೆಸುವಳು. ಅಲ್ಲಿ ಆಕೆ ರಾಜನ ಕಂಚುಕಿ ಶವಷ್ಗಜನ ಮೇಲ್ವಿಚಾರಣೆಯಲ್ಲಿರುವಳು. ಶವಷ್ಗಜನು ರಾಜನ ಉಪಪತ್ನಿಗಳ ಮೇಲ್ವಿಚಾರಕನಾಗಿದ್ದನು. ರಾಜನು ಆಕೆಯ ಹೆಸರೆತ್ತಿ ಕರೆದಾಗ ಮಾತ್ರವೇ ಆಕೆಯು ತಿರುಗಿ ರಾಜನ ಬಳಿಗೆ ಹೋಗುವಳು. ಕರೆಯದಿದ್ದಲ್ಲಿ ಆಕೆಯು ಅಲ್ಲಿಯೇ ಇರುವಳು.
ದಾವೀದನು ಜೆರುಸಲೇಮಿನ ತನ್ನ ಅರಮನೆಗೆ ಬಂದನು. ದಾವೀದನು ಮನೆಕಾಯಲು ಬಿಟ್ಟುಹೋದ ತನ್ನ ಹತ್ತುಮಂದಿ ಉಪಪತ್ನಿಯರನ್ನು ಒಂದು ಮನೆಯಲ್ಲಿ ಇಟ್ಟಿದ್ದನು. ಈ ಮನೆಯನ್ನು ಕಾವಲುಗಾರರು ಕಾಯುತ್ತಿದ್ದರು. ಈ ಹೆಂಗಸರು ತಾವು ಸಾಯುವವರೆಗೆ ಈ ಮನೆಯಲ್ಲಿಯೇ ನೆಲೆಸಿದ್ದರು. ದಾವೀದನು ಅವರಿಗೆ ಆಹಾರ ವಸ್ತ್ರಗಳನ್ನು ಕೊಟ್ಟನು. ಆದರೆ ಅವನು ಅವರೊಂದಿಗೆ ಮಲಗಿಕೊಳ್ಳಲಿಲ್ಲ. ಅವರು ಸಾಯುವವರೆಗೆ ವಿಧವೆಯರಂತಿದ್ದರು.