Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:10 - ಪರಿಶುದ್ದ ಬೈಬಲ್‌

10 ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಆ ಮನುಷ್ಯ ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಮನುಷ್ಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವುದಕ್ಕೆ ಮನಸ್ಸಿಲ್ಲದೆ, ಎದ್ದು ತಡಿಕಟ್ಟಿದ ಎರಡು ಕತ್ತೆಗಳ ಮತ್ತು ತನ್ನ ಉಪಪತ್ನಿಯ ಸಂಗಡ ಹೊರಟುಹೋಗಿ, ಯೆರೂಸಲೇಮು ಎಂಬ ಯೆಬೂಸಿಗೆ ಸರಿಯಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:10
7 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.


ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು. (ಯೆಬೂಸಿಯರು ಆ ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರದೊಳಕ್ಕೆ ಬರಲಾಗದು. ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ಈ ರೀತಿ ಹೇಳಿದರು.


ಯೆಹೂದ್ಯರು ಜೆರುಸಲೇಮಿನ ವಿರುದ್ಧ ಯುದ್ಧಮಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜೆರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು.


ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.


ಆಮೇಲೆ ಆ ಲೇವಿಯೂ ಅವನ ಉಪಪತ್ನಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದರಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು