Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:12 - ಪರಿಶುದ್ದ ಬೈಬಲ್‌

12 ಆದರೆ ಆ ಲೇವಿಯು, “ಬೇಡ, ನಾವು ಪರಿಚಯವಿಲ್ಲದವರ ನಗರದಲ್ಲಿ ಇರುವುದು ಬೇಡ. ಆ ಜನರು ಇಸ್ರೇಲರಲ್ಲ. ನಾವು ಗಿಬೆಯ ನಗರಕ್ಕೆ ಹೋಗೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಆ ದಣಿ, “ನಾವು ಇಸ್ರಯೇಲರಲ್ಲದ ಅನ್ಯರ ಪಟ್ಟಣದಲ್ಲಿ ತಂಗಬಾರದು; ಗಿಬೆಯಕ್ಕೆ ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ದಣಿಯು - ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅವನ ಯಜಮಾನನು ಅವನಿಗೆ, “ನಾವು ಇಲ್ಲಿ ಇಸ್ರಾಯೇಲರಲ್ಲದವರ ಪಟ್ಟಣದಲ್ಲಿ ತಂಗಬಾರದು; ಗಿಬೆಯ ಪಟ್ಟಣಕ್ಕೆ ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:12
9 ತಿಳಿವುಗಳ ಹೋಲಿಕೆ  

ಹೊತ್ತು ಮುಳುಗುವುದರಲ್ಲಿತ್ತು. ಅವರು ಯೆಬೂಸ್ ನಗರದ ಹತ್ತಿರ ಬಂದಿದ್ದರು. ಆಗ ಅವನ ಸೇವಕನು ತನ್ನ ಒಡೆಯನಾದ ಆ ಲೇವಿಯನಿಗೆ, “ಈ ಯೆಬೂಸಿಯರ ನಗರದಲ್ಲಿ ಇದ್ದು ಬಿಡೋಣ, ಈ ರಾತ್ರಿ ಇಲ್ಲಿಯೇ ಕಳೆಯೋಣ” ಎಂದನು.


ಆ ಲೇವಿಯು ಮತ್ತೆ ತನ್ನ ಸೇವಕನಿಗೆ, “ಬಾ ಹೋಗೋಣ, ಗಿಬೆಯದಲ್ಲಾಗಲಿ ಅಥವಾ ರಾಮದಲ್ಲಾಗಲಿ ಈ ರಾತ್ರಿ ಇಳಿದುಕೊಳ್ಳುವ ಪ್ರಯತ್ನ ಮಾಡೋಣ” ಎಂದು ಹೇಳಿದನು.


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,


ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.


ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವಪ್ರೇರಣೆಯಿಂದ ಸೌಲನನ್ನು ಹಿಂಬಾಲಿಸಿದರು.


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ಸೈನಿಕರು ಮಾಬರ ಎಂಬ ಸ್ಥಳದಲ್ಲಿ ಕಣಿವೆಯನ್ನು ದಾಟುತ್ತಾರೆ. ಗೆಬ ಎಂಬಲ್ಲಿ ಮಲಗುವರು. ಆಗ ರಾಮಾವು ಭಯಪಡುವದು. ಸೌಲನ ಗಿಬೆಯದ ಜನರು ಪಲಾಯನ ಮಾಡುವರು.


“ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತ್ತೂರಿಯನ್ನೂದು. ಬೇತಾವೆನಿನಲ್ಲಿ ಎಚ್ಚರಿಕೆಯನ್ನು ನೀಡು. ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು