Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:14 - ಪರಿಶುದ್ದ ಬೈಬಲ್‌

14 ಆ ಲೇವಿಯು ಮತ್ತು ಅವನ ಸಂಗಡ ಇದ್ದ ಜನರು ಪ್ರಯಾಣ ಮುಂದುವರಿಸಿದರು. ಅವರು ಗಿಬೆಯ ನಗರವನ್ನು ಪ್ರವೇಶ ಮಾಡಿದ ಸಮಯದಲ್ಲಿ ಸೂರ್ಯನು ಮುಳುಗುತ್ತಿದ್ದನು. ಗಿಬೆಯ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಣುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾಮೀನನಿಗೆ ಸೇರಿದ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯ ಮುಳುಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:14
4 ತಿಳಿವುಗಳ ಹೋಲಿಕೆ  

ಆ ಲೇವಿಯು ಮತ್ತೆ ತನ್ನ ಸೇವಕನಿಗೆ, “ಬಾ ಹೋಗೋಣ, ಗಿಬೆಯದಲ್ಲಾಗಲಿ ಅಥವಾ ರಾಮದಲ್ಲಾಗಲಿ ಈ ರಾತ್ರಿ ಇಳಿದುಕೊಳ್ಳುವ ಪ್ರಯತ್ನ ಮಾಡೋಣ” ಎಂದು ಹೇಳಿದನು.


ಅವರು ಗಿಬೆಯದಲ್ಲಿ ತಮ್ಮ ಪ್ರಯಾಣವನ್ನು ನಿಲ್ಲಿಸಿದರು. ಅಂದು ರಾತ್ರಿ ಆ ನಗರದಲ್ಲಿ ಇರುವುದಕ್ಕೆ ನಿರ್ಧಾರ ಮಾಡಿದರು. ಅವರು ನಗರದ ಬೀದಿಯ ಮುಖ್ಯಸ್ಥಳಕ್ಕೆ ಬಂದು ಅಲ್ಲಿ ಕುಳಿತುಕೊಂಡರು. ಯಾರೂ ಅವರನ್ನು ಆ ರಾತ್ರಿ ತಮ್ಮ ಮನೆಯಲ್ಲಿ ಇರಲು ಕರೆಯಲಿಲ್ಲ.


ಆ ಸಾಯಂಕಾಲ ಒಬ್ಬ ವೃದ್ಧನು ಹೊಲದಿಂದ ಮನೆಗೆ ಬರುತ್ತಿದ್ದನು. ಅವನು ಎಫ್ರಾಯೀಮ್ ಬೆಟ್ಟಪ್ರದೇಶದವನಾಗಿದ್ದು, ಈಗ ಗಿಬೆಯ ನಗರದಲ್ಲಿ ವಾಸಮಾಡುತ್ತಿದ್ದನು. (ಗಿಬೆಯದ ನಿವಾಸಿಗಳು ಬೆನ್ಯಾಮೀನ್ಯರಾಗಿದ್ದರು.)


ಅವನು ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಊರೀಯೇಲನ ಮಗಳಾದ ಮೀಕಾಯಳು ಅಬೀಯನ ತಾಯಿ. ಊರೀಯೇಲನು ಗಿಬೆಯ ಊರಿನವನು. ಅಬೀಯನಿಗೂ ಯಾರೊಬ್ಬಾಮನಿಗೂ ಯುದ್ಧವಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು