ನ್ಯಾಯಸ್ಥಾಪಕರು 19:22 - ಪರಿಶುದ್ದ ಬೈಬಲ್22 ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.