Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:26 - ಪರಿಶುದ್ದ ಬೈಬಲ್‌

26 ಬೆಳಗಿನ ಜಾವ ಅವಳು ತನ್ನ ಒಡೆಯನಿದ್ದ ಮನೆಗೆ ಬಂದಳು. ಅವಳು ಮನೆಯ ಮುಖ್ಯದ್ವಾರದಲ್ಲಿ ಬಿದ್ದುಬಿಟ್ಟಳು. ಬೆಳಗಾಗುವವರೆಗೂ ಅವಳು ಅಲ್ಲಿಯೇ ಬಿದ್ದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಸ್ತ್ರೀ ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ತಂಗಿದ್ದ ಮನೆಯ ಬಾಗಿಲಲ್ಲಿ ಬಿದ್ದಳು; ಬೆಳಗಾದರೂ ಏಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳುಕೊಂಡಿದ್ದ ಮನೆಯ ಬಾಗಲಲ್ಲಿ ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಸ್ತ್ರೀ ಉದಯಕಾಲಕ್ಕೆ ಮುಂಚೆ ಬಂದು ಬೆಳಗಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:26
5 ತಿಳಿವುಗಳ ಹೋಲಿಕೆ  

ನಾನು ಸಾರಳಂತಹ ಸ್ತ್ರೀಯರ ಬಗ್ಗೆ ಹೇಳುತ್ತಿದ್ದೇನೆ. ಅವಳು ತನ್ನ ಗಂಡನಾದ ಅಬ್ರಹಾಮನಿಗೆ ವಿಧೇಯಳಾಗಿದ್ದು, ಅವನನ್ನು ತನ್ನ ಒಡೆಯನೆಂದು ಕರೆದಳು. ಸ್ತ್ರೀಯರಾದ ನೀವು ಭಯಪಡದೆ ಯಾವಾಗಲೂ ಯೋಗ್ಯವಾದುದನ್ನು ಮಾಡಿದರೆ, ನೀವು ಸಾರಳ ನಿಜವಾದ ಮಕ್ಕಳಾಗುವಿರಿ.


ಆ ಲೇವಿಯನು ಮರುದಿನ ಬೆಳಿಗ್ಗೆ ಬೇಗ ಎದ್ದನು. ಅವನು ತನ್ನ ಮನೆಗೆ ಹೋಗಬೇಕೆಂದಿದ್ದನು. ಆದ್ದರಿಂದ ಹೊರಗೆ ಹೋಗಲು ಬಾಗಿಲು ತೆರೆದನು. ಬಾಗಿಲ ಮುಂದೆ ಹೊಸ್ತಿಲದ ಮೇಲೆ ಕೈಚಾಚಿ ಬಿದ್ದಿದ್ದ ತನ್ನ ಉಪಪತ್ನಿಯನ್ನು ಕಂಡನು.


ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.


ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.


ಆದರೆ ಆ ನೀಚರು ಆ ವೃದ್ಧನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಆಗ ಆ ಲೇವಿಯು ತನ್ನ ಉಪಪತ್ನಿಯನ್ನು ಹೊರಗೆ ಕರೆದುಕೊಂಡು ಹೋಗಿ ಆ ನೀಚರಿಗೆ ಒಪ್ಪಿಸಿದನು. ಆ ನೀಚರು ಅವಳನ್ನು ಪೀಡಿಸಿ ಇಡೀ ರಾತ್ರಿ ಅವಳನ್ನು ಸಂಭೋಗಿಸಿದರು. ಬೆಳಗಿನ ಜಾವ ಅವಳನ್ನು ಹೋಗಲು ಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು