29 ಅವನು ಮನೆಗೆ ಬಂದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹನ್ನೆರಡು ಹೋಳಾಗಿ ಕತ್ತರಿಸಿದನು. ಆಮೇಲೆ ಅವನು ಆ ಸ್ತ್ರೀಯ ದೇಹದ ಹನ್ನೆರಡು ಹೋಳುಗಳನ್ನು ಇಸ್ರೇಲರು ವಾಸಮಾಡುವ ಎಲ್ಲ ಪ್ರದೇಶಗಳಿಗೆ ಕಳುಹಿಸಿಕೊಟ್ಟನು.
29 ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.
29 ಅವನು ಮನೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ ಅವುಗಳನ್ನು ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.
29 ಅವನು ಮನೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ ಅವುಗಳನ್ನು ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿದನು.
29 ಅವನು ತನ್ನ ಮನೆಗೆ ಹೋದಾಗ, ಒಂದು ಖಡ್ಗವನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡುಗಳಾಗಿ ಕಡಿದು, ಅವುಗಳನ್ನು ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿದನು.
ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.