ನ್ಯಾಯಸ್ಥಾಪಕರು 19:3 - ಪರಿಶುದ್ದ ಬೈಬಲ್3 ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತನಾಡಿಸಿ ತಿರುಗಿ ಮನೆಗೆ ಕರೆದುಕೊಂಡು ಹೋಗಬೇಕೆಂದು ಒಬ್ಬ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತವರುಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ಮತ್ತೆ ಮನೆಗೆ ಕರೆದು ತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆ ಅವನನ್ನು ತನ್ನ ತೌರುಮನೆಯಲ್ಲಿ ಸೇರಿಸಿಕೊಂಡಳು. ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ತಿರಿಗಿ ಮನೆಗೆ ಕರತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತೌರ ಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅವಳ ಗಂಡನು ಎದ್ದು, ಅವಳ ಸಂಗಡ ಪ್ರೀತಿಯಿಂದ ಮಾತನಾಡಿ, ಅವಳನ್ನು ತಿರುಗಿ ಕರೆತರುವುದಕ್ಕೆ ತನ್ನ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರೆದುಕೊಂಡು ಹೋದಳು. ಆಕೆಯ ತಂದೆ ಅವನನ್ನು ಕಂಡಾಗ, ಸಂತೋಷದಿಂದ ಅವನನ್ನು ಸ್ವಾಗತಿಸಿದನು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ.