Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:4 - ಪರಿಶುದ್ದ ಬೈಬಲ್‌

4 ಅವಳ ತಂದೆಯು ಆ ಲೇವಿಯನನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋಗಿ, ಅಲ್ಲೇ ಇರುವಂತೆ ಕೇಳಿಕೊಂಡನು. ಆದ್ದರಿಂದ ಆ ಲೇವಿಯು ಅಲ್ಲಿ ಮೂರು ದಿನ ಇದ್ದನು. ಅವನು ಅನ್ನಪಾನಮಾಡಿ ಮಾವನ ಮನೆಯಲ್ಲಿ ಮಲಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಸ್ತ್ರೀ ಹಾಗು ಅವನ ಮಾವ ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡರು. ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನ ಮಾವನು ಅಂದರೆ ಆ ಸ್ತ್ರೀಯ ತಂದೆಯು ಅವನನ್ನು ಅಲ್ಲಿರುವಂತೆ ಒತ್ತಾಯ ಮಾಡಿದನು. ಆದ್ದರಿಂದ ಅವನು ಅಲ್ಲಿ ಊಟಮಾಡುತ್ತಾ, ಕುಡಿಯುತ್ತಾ, ಮಲಗುತ್ತಾ ಮೂರು ದಿನಗಳನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:4
4 ತಿಳಿವುಗಳ ಹೋಲಿಕೆ  

ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.


ಆಗ ಆಕೆಯ ಗಂಡನು ಅವಳ ಬಳಿಗೆ ಹೋದನು; ಅವಳೊಂದಿಗೆ ಪ್ರೀತಿಯಿಂದ ಮಾತನಾಡಿ ಅವಳನ್ನು ಕರೆದುಕೊಂಡು ಬರಬೇಕೆಂಬುದು ಅವನ ಆಲೋಚನೆಯಾಗಿತ್ತು. ಆದ್ದರಿಂದ ಅವನು ತನ್ನ ಸೇವಕನೊಡನೆ ಎರಡು ಕತ್ತೆಗಳನ್ನೂ ತೆಗೆದುಕೊಂಡು ಹೋದನು. ಆ ಲೇವಿಯನು ಆಕೆಯ ತಂದೆಯ ಮನೆಗೆ ಬಂದನು. ಅವಳ ತಂದೆಯು ಆ ಲೇವಿಯನನ್ನು ನೋಡಿ ಅವನನ್ನು ಸ್ವಾಗತಿಸಲು ಮನೆಯ ಹೊರಗೆ ಬಂದನು. ಅವಳ ತಂದೆಗೆ ಬಹಳ ಸಂತೋಷವಾಯಿತು.


ನಾಲ್ಕನೆಯ ದಿನ ಅವರು ಬೆಳಗಿನ ಜಾವ ಬೇಗ ಎದ್ದರು. ಆ ಲೇವಿಯು ಹೊರಡುವದಕ್ಕೆ ಸಿದ್ಧನಾಗುತ್ತಿದ್ದನು. ಆದರೆ ಮಾವನು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡು; ಆಮೇಲೆ ಹೋಗುವಿಯಂತೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು