ನ್ಯಾಯಸ್ಥಾಪಕರು 19:6 - ಪರಿಶುದ್ದ ಬೈಬಲ್6 ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರಿಬ್ಬರೂ ಕುಳಿತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆ ಪುನಃ ಅವನಿಗೆ, “ದಯವಿಟ್ಟು ಈ ರಾತ್ರಿ ಇಲ್ಲೇ ಇದ್ದು ಸಂತೋಷಪಡು,” ಎಂದು ಹೇಳಿದರೂ ಅವನು ಹೊರಡಲು ಸಿದ್ಧನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರಿಬ್ಬರೂ ಕೂತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ತಿರಿಗಿ ಅವನಿಗೆ - ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು ಎಂದು ಹೇಳಿದರೂ ಅವನು ಹೊರಡುವದಕ್ಕಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ಅವರಿಬ್ಬರು ಊಟ ಮಾಡಲು, ಕುಡಿಯಲು ಕುಳಿತುಕೊಂಡರು. ಅನಂತರದಲ್ಲಿ ಆ ಸ್ತ್ರೀಯ ತಂದೆಯು, “ಈ ರಾತ್ರಿ ಇಲ್ಲೇ ಇದ್ದುಕೊಂಡು ಸಂತೋಷಪಡು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.