ನ್ಯಾಯಸ್ಥಾಪಕರು 19:9 - ಪರಿಶುದ್ದ ಬೈಬಲ್9 ಆಮೇಲೆ ಆ ಲೇವಿಯೂ ಅವನ ಉಪಪತ್ನಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದರಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ಅವನು, ಅವನ ಉಪಪತ್ನಿ ಹಾಗು ಸೇವಕನು ಹೋಗುವುದಕ್ಕ ಸಿದ್ಧರಾಗಲು ಆ ಸ್ತ್ರೀಯ ತಂದೆ ಅಳಿಯನಿಗೆ, “ಹೊತ್ತುಮೀರಿತು; ಸಂಜೆ ಆಯಿತು. ದಯವಿಟ್ಟು ಈ ದಿನ ರಾತ್ರಿ ಇಲ್ಲೇ ಇರು; ನೋಡು, ಸಂಜೆಯಾಗಿಹೋಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅನಂತರ ಅವನೂ ಅವನ ಉಪಪತ್ನಿಯೂ ಸೇವಕನೂ ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಹೊತ್ತು ಹೋಯಿತು; ಸಂಜೆಯಾಯಿತು. ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಸಾಯಂಕಾಲವಾಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು ಎಂದು ಬೇಡಿಕೊಂಡರೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನೂ, ಅವನ ಉಪಪತ್ನಿಯೂ ಅವನ ಸೇವಕನೂ ಹೋಗುವುದಕ್ಕೆ ಎದ್ದಾಗ, ಅವನ ಮಾವನು ಅವನಿಗೆ, “ಇಗೋ, ಹೊತ್ತು ಹೋಗಿ ಸಂಜೆ ಆಯಿತು. ಈ ರಾತ್ರಿ ನೀನು ದಯಮಾಡಿ ಇಲ್ಲೇ ಇರು; ಹೊತ್ತು ಮುಣುಗುತ್ತಾ ಬಂತು. ನೀನು ಈ ರಾತ್ರಿ ಇಲ್ಲಿದ್ದು, ನಿನ್ನ ಗುಡಾರಕ್ಕೆ ನಾಳೆ ಬೆಳಿಗ್ಗೆ ಎದ್ದು, ನಿಮ್ಮ ಮಾರ್ಗ ಹಿಡಿದು ಹೋಗಬಹುದು,” ಎಂದನು. ಅಧ್ಯಾಯವನ್ನು ನೋಡಿ |
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.