ನ್ಯಾಯಸ್ಥಾಪಕರು 2:1 - ಪರಿಶುದ್ದ ಬೈಬಲ್1 ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಾಯೇಲ್ಯರಿಗೆ, “ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ, ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರೆತಂದೆನು. ‘ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲವೆಂದು ನಾನು ಮಾತು ಕೊಟ್ಟಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀವಿುಗೆ ಬಂದು ಇಸ್ರಾಯೇಲ್ಯರಿಗೆ - ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವದಿಲ್ಲವೆಂದು ನಾನು ಮಾತು ಕೊಟ್ಟಾಗ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು. ಅಧ್ಯಾಯವನ್ನು ನೋಡಿ |
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”