Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:13 - ಪರಿಶುದ್ದ ಬೈಬಲ್‌

13 ಇಸ್ರೇಲರು ಯೆಹೋವನನ್ನು ಅನುಸರಿಸದೆ ಬಾಳ್ ದೇವರನ್ನೂ ಅಷ್ಟೋರೆತ್ ದೇವತೆಯನ್ನೂ ಪೂಜಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಸರ್ವೇಶ್ವರನನ್ನು ಬಿಟ್ಟು ‘ಬಾಳ್ ಅಷ್ಟೋರೆತ್’ ಎಂಬ ದೇವತೆಗಳನ್ನು ಪೂಜಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಯೆಹೋವನನ್ನು ಬಿಟ್ಟು ಬಾಳ್ ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಯೆಹೋವ ದೇವರನ್ನು ಬಿಟ್ಟು, ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:13
19 ತಿಳಿವುಗಳ ಹೋಲಿಕೆ  

ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.


ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು.


ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಅಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.


ಆಕಾಶದಲ್ಲಾಗಲಿ ಭೂಮಿಯ ಮೇಲಾಗಲಿ ದೇವರುಗಳೆಂದು ಕರೆಯಲ್ಪಡುವ ವಸ್ತುಗಳಿದ್ದರೆ ಅವು ನಿಜವಾಗಿಯೂ ನಮಗೆ ಮುಖ್ಯವಲ್ಲ. (ಅನೇಕ ವಸ್ತುಗಳನ್ನು ಜನರು “ದೇವರು”ಗಳೆಂತಲೂ “ಪ್ರಭು”ಗಳೆಂತಲೂ ಕರೆಯುತ್ತಾರೆ.)


ಪೂರ್ವಕಾಲದಲ್ಲಿ, ರಾಜನಾದ ಸೊಲೊಮೋನನು ಜೆರುಸಲೇಮಿನ ಬಳಿಯಲ್ಲಿದ್ದ ವಿಘ್ನಪರ್ವತದ ಮೇಲೆ ಕೆಲವು ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆ ಉನ್ನತಸ್ಥಳಗಳು ಪರ್ವತದ ದಕ್ಷಿಣದಿಕ್ಕಿನ ಮೇಲಿದ್ದವು. ರಾಜನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಆ ಉನ್ನತಸ್ಥಳಗಳನ್ನು ನಿರ್ಮಿಸಿದ್ದನು. ಆದರೆ ರಾಜನಾದ ಯೋಷೀಯನು ಆ ಪೂಜಾಸ್ಥಳಗಳನ್ನೆಲ್ಲಾ ನಾಶಪಡಿಸಿದನು.


ಸೊಲೊಮೋನನು ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದ ಕಾರಣ ನಾನು ಅವನ ರಾಜ್ಯವನ್ನು ಅವನಿಂದ ತೆಗೆದುಕೊಳ್ಳುವೆನು. ಅವನು ಚೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ ಮೋವಾಬ್ಯರ ದೇವರಾದ ಕೆಮೋಷನನ್ನೂ ಅಮ್ಮೋನಿಯರ ದೇವರಾದ ಮಿಲ್ಕೋಮನನ್ನೂ ಪೂಜಿಸಿದನು. ಸೊಲೊಮೋನನು ತಾನು ಮಾಡುತ್ತಿದ್ದ ಸರಿಯಾದ ಮತ್ತು ಉತ್ತಮವಾದ ಕಾರ್ಯಗಳನ್ನು ನಿಲ್ಲಿಸಿದನು. ಅವನು ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಲಿಲ್ಲ. ತನ್ನ ತಂದೆಯಾದ ದಾವೀದನು ಜೀವಿಸಿದಂತೆ ಅವನು ಜೀವಿಸುತ್ತಿಲ್ಲ.


ಸೊಲೊಮೋನನು ಅಷ್ಟೋರೆತ್ ದೇವತೆಯನ್ನು ಪೂಜಿಸಿದನು. ಇದು ಚೀದೋನ್ಯರ ದೇವತೆ. ಸೊಲೊಮೋನನು ಮಿಲ್ಕೋಮನನ್ನು ಆರಾಧಿಸಿದನು. ಇದು ಅಮ್ಮೋನಿಯರ ಭಯಂಕರ ವಿಗ್ರಹ.


ಅಷ್ಟೋರೆತಳ ದೇವಾಲಯದಲ್ಲಿ ಅವರು ಸೌಲನ ಆಯುಧಗಳನ್ನು ಇಟ್ಟರು. ಫಿಲಿಷ್ಟಿಯರು ಸೌಲನ ದೇಹವನ್ನು ಬೇತ್‌ಷೆಯಾನಿನ ಗೋಡೆಗೆ ನೇತುಹಾಕಿದರು.


ಇಸ್ರೇಲಿನ ಜನರು ದುಷ್ಕೃತ್ಯಗಳನ್ನು ಮಾಡಿದರು ಮತ್ತು ಸುಳ್ಳುದೇವರಾದ ಬಾಳನ ಸೇವೆ ಮಾಡಿದರು. ಯೆಹೋವನು ಇಸ್ರೇಲರ ಈ ದುಷ್ಕೃತ್ಯಗಳನ್ನು ನೋಡಿದನು.


ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ಆದರೆ ನಿಮ್ಮ ಪೂರ್ವಿಕರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟು, ‘ನಾವು ಯೆಹೋವನಾದ ನಿನ್ನನ್ನು ಬಿಟ್ಟು ಸುಳ್ಳುದೇವರಾದ ಬಾಳನ ಮತ್ತು ಸುಳ್ಳುದೇವತೆಯಾದ ಅಷ್ಟೋರೆತಳ ಸೇವೆ ಮಾಡಿ ಪಾಪಮಾಡಿದ್ದೇವೆ. ಆದರೆ ಈಗ ನಮ್ಮನ್ನು ಶತ್ರುಗಳಿಂದ ರಕ್ಷಿಸು; ಆಗ ನಾವು ನಿನ್ನ ಸೇವೆಮಾಡುತ್ತೇವೆ’ ಎಂದು ಹೇಳಿದರು.


ಆಗ ಜನರು, ‘ಯಾಕೆಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಆತನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಹೊರತಂದನು. ಆದರೆ ಅವರು ಬೇರೆ ದೇವರುಗಳನ್ನು ಪೂಜಿಸಿ ಅವುಗಳ ಸೇವೆಮಾಡಿದರು. ಆದ್ದರಿಂದಲೇ ಭಯಂಕರವಾದ ಈ ಸಂಕಟಗಳನ್ನೆಲ್ಲ ದೇವರು ಇಸ್ರೇಲರಿಗೆ ಬರಮಾಡಿದನು’ ಎಂದು ಹೇಳುವರು” ಅಂದನು.


ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.


ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು.


“ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ.


ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಧಿಗಳನ್ನು ಮೀರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು