ನ್ಯಾಯಸ್ಥಾಪಕರು 2:15 - ಪರಿಶುದ್ದ ಬೈಬಲ್15 ಇಸ್ರೇಲರು ಯುದ್ಧಕ್ಕೆ ಹೋದಾಗಲೆಲ್ಲಾ ಸೋಲನ್ನನುಭವಿಸಿದರು; ಏಕೆಂದರೆ ಯೆಹೋವನು ಅವರ ಸಂಗಡವಿರಲಿಲ್ಲ. ಸುತ್ತಮುತ್ತಲಿನ ಜನರ ದೇವತೆಗಳನ್ನು ಪೂಜಿಸಿದರೆ ಸೋಲಾಗುವುದೆಂದು ಈಗಾಗಲೇ ಯೆಹೋವನು ಇಸ್ರೇಲರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟಿದ್ದನು. ಇಸ್ರೇಲರು ಹೆಚ್ಚಿನ ಕಷ್ಟನಷ್ಟಗಳನ್ನು ಅನುಭವಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು; ಅವರಿಗೆ ಬಹುಸಂಕಟವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಯಿಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವುದಕ್ಕೆ ಯೆಹೋವ ದೇವರ ಕೈ ಅವರಿಗೆ ವಿರೋಧವಾಗಿತ್ತು. ಅಧ್ಯಾಯವನ್ನು ನೋಡಿ |