ನ್ಯಾಯಸ್ಥಾಪಕರು 2:5 - ಪರಿಶುದ್ದ ಬೈಬಲ್5 ಆದ್ದರಿಂದ ಇಸ್ರೇಲರು ತಾವು ಗೋಳಾಡಿದ ಸ್ಥಳಕ್ಕೆ ಬೋಕೀಮ್ ಎಂದು ಕರೆದರು. ಬೋಕೀಮಿನಲ್ಲಿ ಇಸ್ರೇಲರು ಯೆಹೋವನಿಗೋಸ್ಕರ ಯಜ್ಞ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದುದರಿಂದಲೇ ಆ ಸ್ಥಳಕ್ಕೆ ‘ಬೋಕೀಮ್’ ಎಂದು ಹೆಸರಿಟ್ಟು ಅಲ್ಲಿಯೇ ಸರ್ವೇಶ್ವರನಿಗೆ ಬಲಿಯನ್ನರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು, ಅಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿ |
ಯೆಹೋವನ ದೂತನು ಗಿಲ್ಗಾಲ್ ನಗರದಿಂದ ಬೋಕೀಮ್ ನಗರದವರೆಗೆ ಹೋದನು. ಆ ದೂತನು ಇಸ್ರೇಲರಿಗೆ ಯೆಹೋವನ ಒಂದು ಸಂದೇಶವನ್ನು ತಿಳಿಸಿದನು. ಆ ಸಂದೇಶವು ಹೀಗೆದೆ: “ನಾನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ಹೊರಗೆತಂದೆ. ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ‘ನಾನು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದಿಗೂ ಮುರಿಯುವುದಿಲ್ಲ.