Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:9 - ಪರಿಶುದ್ದ ಬೈಬಲ್‌

9 ಇಸ್ರೇಲರು ಯೆಹೋಶುವನನ್ನು ಅವನ ಸ್ವಾಸ್ತ್ಯ ಭೂಮಿಯಲ್ಲಿ ಸಮಾಧಿ ಮಾಡಿದರು. ಅದು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿ ತಿಮ್ನತ್ ಹೆರೆಸಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನನ್ನು ಅವನ ಸ್ವಾಧೀನದ ಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನನ್ನು ಅವನ ಸ್ವಾಸ್ತ್ಯಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನನ್ನು ಅವನ ಸ್ವಾಸ್ತ್ಯಭೂವಿುಯಾದ ತಿಮ್ನತ್‍ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು; ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್‍ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನನ್ನು ಎಫ್ರಾಯೀಮನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ ಹೆರೆಸ್‌ನಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:9
6 ತಿಳಿವುಗಳ ಹೋಲಿಕೆ  

ಆ ಭೂಮಿಯನ್ನು ಕೊಡಬೇಕೆಂಬುದು ಯೆಹೋವನ ಆಜ್ಞೆಯಾಗಿತ್ತು. ಆದ್ದರಿಂದ ಅವರು ಯೆಹೋಶುವನ ಅಪೇಕ್ಷೆಯಂತೆ ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಅವನಿಗೆ ಕೊಟ್ಟರು. ಯೆಹೋಶುವನು ಆ ಪಟ್ಟಣವನ್ನು ಭದ್ರಗೊಳಿಸಿ ಅಲ್ಲಿ ವಾಸವಾಗಿದ್ದನು.


ಯೆಹೋಶುವನನ್ನು ತಿಮ್ನತ್ ಸೆರಹದ ಅವನ ಸ್ವಂತ ಭೂಮಿಯಲ್ಲಿ ಸಮಾಧಿ ಮಾಡಿದರು. ಇದು ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.


ಹೀಗೆ ದೇಶವನ್ನು ಆಯಾ ಕುಲಗಳವರಿಗೆ ನಾಯಕರು ಹಂಚಿಕೊಟ್ಟರು. ಆಗ ಇಸ್ರೇಲರು ನೂನನ ಮಗನಾದ ಯೆಹೋಶುವನಿಗೂ ಸ್ವಲ್ಪ ಭೂಮಿಯನ್ನು ಕೊಡಬೇಕೆಂದು ನಿರ್ಧರಿಸಿದರು. ಈ ಭೂಮಿಯನ್ನು ಅವನಿಗೆ ಕೊಡುವುದಾಗಿ ವಾಗ್ದಾನ ಮಾಡಲಾಗಿತ್ತು.


ನೂನನ ಮಗನಾದ ಮತ್ತು ಯೆಹೋವನ ಸೇವಕನಾದ ಯೆಹೋಶುವನು ನೂರಹತ್ತು ವರ್ಷ ಬದುಕಿ ಮರಣ ಹೊಂದಿದನು.


ಇದಾದ ಮೇಲೆ ನೂನನ ಮಗನಾದ ಯೆಹೋಶುವನು ಮರಣ ಹೊಂದಿದನು. ಯೆಹೋಶುವನು ನೂರಹತ್ತು ವರ್ಷ ಬದುಕಿದನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು