ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು.