ನ್ಯಾಯಸ್ಥಾಪಕರು 20:13 - ಪರಿಶುದ್ದ ಬೈಬಲ್13 ಆ ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.” ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಯೇಲರ ಮಧ್ಯೆಯಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ,” ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲ್ಯರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ, ಅಧ್ಯಾಯವನ್ನು ನೋಡಿ |
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.