Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:14 - ಪರಿಶುದ್ದ ಬೈಬಲ್‌

14 ಬೆನ್ಯಾಮೀನ್ಯರು ತಮ್ಮ ನಗರಗಳನ್ನು ಬಿಟ್ಟು ಇಸ್ರೇಲಿನ ಬೇರೆ ಕುಲಗಳ ಜನರೊಂದಿಗೆ ಯುದ್ಧಮಾಡಲು ಗಿಬೆಯ ನಗರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಯೇಲರ ವಿರುದ್ಧ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲರ ಸಂಗಡ ಯುದ್ಧಮಾಡುವುದಕ್ಕೆ ಹೊರಡುವ ಹಾಗೆ ಪಟ್ಟಣಗಳಲ್ಲಿಂದ ಗಿಬೆಯದಲ್ಲಿ ಬಂದು ಕೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:14
6 ತಿಳಿವುಗಳ ಹೋಲಿಕೆ  

ಆದರೆ ಯಾರೊಬ್ಬಾಮನು ತನ್ನ ಸೈನ್ಯದ ಒಂದು ಭಾಗವನ್ನು ಅಬೀಯನ ಸೈನ್ಯದ ಹಿಂಭಾಗಕ್ಕೆ ಅವನಿಗೆ ಗೊತ್ತಿಲ್ಲದಂತೆ ಕಳುಹಿಸಿದನು. ಯಾರೊಬ್ಬಾಮನ ಸೈನ್ಯವು ಅಬೀಯನ ಸೈನ್ಯಕ್ಕೆ ಎದುರಾಗಿತ್ತು. ಅಬೀಯನ ಹಿಂದೆ ಯಾರೊಬ್ಬಾಮನ ಸೈನ್ಯವು ಅಡಗಿಕೊಂಡಿತ್ತು.


ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು.


ಆದರೆ ಮತ್ತೆ ಎದೋಮ್ಯರು, “ನೀವು ನಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಾವು ಬಿಡುವುದಿಲ್ಲ” ಎಂದು ಉತ್ತರಿಸಿದರು. ಬಳಿಕ ಎದೋಮ್ಯರ ಅರಸನು ಬಲಿಷ್ಠವಾದ ದೊಡ್ಡ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಹೊರಟನು.


ಆ ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.” ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ.


ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು