ನ್ಯಾಯಸ್ಥಾಪಕರು 20:17 - ಪರಿಶುದ್ದ ಬೈಬಲ್17 ಬೆನ್ಯಾಮೀನ್ಯರನ್ನು ಬಿಟ್ಟು ಉಳಿದೆಲ್ಲ ಇಸ್ರೇಲ್ ಕುಲಗಳವರು ಸೇರಿದ್ದರು. ಅವರಲ್ಲಿ ನಾಲ್ಕು ಲಕ್ಷ ಸೈನಿಕರಿದ್ದರು. ಈ ನಾಲ್ಕು ಲಕ್ಷ ಜನರ ಹತ್ತಿರ ಕತ್ತಿಗಳಿದ್ದವು. ಅವರಲ್ಲಿ ಪ್ರತಿಯೊಬ್ಬನು ತರಬೇತಿ ಪಡೆದ ಸೈನಿಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬೆನ್ಯಾಮೀನ್ಯರಲ್ಲದ ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು; ಇವರೆಲ್ಲರೂ ವೀರರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬೆನ್ಯಾಮೀನ್ಯರಲ್ಲದ ಇಸ್ರಯೇಲರಲ್ಲಿ ನಾಲ್ಕು ಲಕ್ಷ ಯೋಧರು ಇದ್ದರು; ಇವರೆಲ್ಲರು ವೀರರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬೆನ್ಯಾಮೀನ್ಯರಲ್ಲದ ಇಸ್ರಾಯೇಲ್ಯರಲ್ಲಿ ನಾಲ್ಕು ಲಕ್ಷ ಭಟರಿದ್ದರು; ಇವರೆಲ್ಲರೂ ವೀರರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬೆನ್ಯಾಮೀನನವರ ಹೊರತು ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು. ಅಧ್ಯಾಯವನ್ನು ನೋಡಿ |
ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.