18 ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.
18 ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.
18 ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.
18 ಇಸ್ರಾಯೇಲ್ಯರು ಬೇತೇಲಿಗೆ ಹೋಗಿ - ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಯೆಹೋವನನ್ನು ಕೇಳಲು ಆತನು - ಮೊದಲು ಯೆಹೂದಕುಲದವರು ಹೋಗಲಿ ಎಂದು ಹೇಳಿದನು.
18 ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.
ಅದಕ್ಕೆ ಲೇವಿಯು, “ನಾವು ಯೆಹೂದದ ಬೆತ್ಲೆಹೇಮಿನಿಂದ ಹೊರಟಿದ್ದೇವೆ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ಮನೆಗೆ ಹೋಗುತ್ತಿದ್ದೇವೆ. ಆದರೆ ಈ ರಾತ್ರಿ ಇಲ್ಲಿ ತಂಗಲು ಯಾರೂ ನಮ್ಮನ್ನು ತಮ್ಮ ಮನೆಗೆ ಆಹ್ವಾನಿಸಲಿಲ್ಲ. ನಾನು ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ. ಈಗ ನಾನು ನಮ್ಮ ಮನೆಗೆ ಹೋಗುತ್ತಿದ್ದೇನೆ.
ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.
ಬೆನ್ಯಾಮೀನ್ಯರನ್ನು ಬಿಟ್ಟು ಉಳಿದೆಲ್ಲ ಇಸ್ರೇಲ್ ಕುಲಗಳವರು ಸೇರಿದ್ದರು. ಅವರಲ್ಲಿ ನಾಲ್ಕು ಲಕ್ಷ ಸೈನಿಕರಿದ್ದರು. ಈ ನಾಲ್ಕು ಲಕ್ಷ ಜನರ ಹತ್ತಿರ ಕತ್ತಿಗಳಿದ್ದವು. ಅವರಲ್ಲಿ ಪ್ರತಿಯೊಬ್ಬನು ತರಬೇತಿ ಪಡೆದ ಸೈನಿಕನಾಗಿದ್ದನು.
ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ.