ನ್ಯಾಯಸ್ಥಾಪಕರು 20:21 - ಪರಿಶುದ್ದ ಬೈಬಲ್21 ಆಗ ಬೆನ್ಯಾಮೀನ್ಯರ ಸೈನ್ಯವು ಗಿಬೆಯ ನಗರದಿಂದ ಹೊರಗೆ ಬಂದಿತು. ಆ ದಿನದ ಯುದ್ಧದಲ್ಲಿ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲ್ ಸೈನ್ಯದ ಇಪ್ಪತ್ತೆರಡು ಸಾವಿರ ಜನರನ್ನು ಕೊಂದುಹಾಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದಿನ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಬೆನ್ಯಾಮೀನ್ಯರು ಗಿಬೆಯದಿಂದ ಹೊರಟು, ಇಸ್ರಾಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿವಸದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು. ಅಧ್ಯಾಯವನ್ನು ನೋಡಿ |
ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.