ನ್ಯಾಯಸ್ಥಾಪಕರು 20:22 - ಪರಿಶುದ್ದ ಬೈಬಲ್22-23 ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹಕಟ್ಟಿದ ಸ್ಥಳದಲ್ಲೇ ತಿರುಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇಸ್ರಯೇಲರು ಪುನಃ ಧೈರ್ಯ ತಂದುಕೊಂಡು ಮೊದಲನೆಯ ದಿನ ವ್ಯೂಹಕಟ್ಟಿದ ಸ್ಥಳದಲ್ಲೇ ಮತ್ತೆ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಸ್ರಾಯೇಲ್ಯರು ತಿರಿಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹ ಕಟ್ಟಿದ ಸ್ಥಳದಲ್ಲೇ ತಿರಿಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇಸ್ರಾಯೇಲರಾದ ಜನರು ಬಲಗೊಂಡು, ಮೊದಲನೆಯ ದಿವಸ ಯುದ್ಧಕ್ಕೆ ವ್ಯೂಹ ಕಟ್ಟಿದ ಸ್ಥಳದಲ್ಲಿ ತಿರುಗಿ ವ್ಯೂಹ ಕಟ್ಟಿದರು. ಅಧ್ಯಾಯವನ್ನು ನೋಡಿ |