Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:26 - ಪರಿಶುದ್ದ ಬೈಬಲ್‌

26 ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದವರೆಗೂ ಉಪವಾಸ ಮಾಡಿದರು. ಇದಲ್ಲದೆ ಅವರು ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:26
18 ತಿಳಿವುಗಳ ಹೋಲಿಕೆ  

ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.


ಯೆಹೋಷಾಫಾಟನು ಭಯಭೀತನಾಗಿ ಯೆಹೋವನನ್ನು ವಿಚಾರಿಸಲು ನಿರ್ಧರಿಸಿದನು. ಯೆಹೂದದ ಎಲ್ಲಾ ಜನರು ಉಪವಾಸ ಮಾಡಬೇಕೆಂದು ಆಜ್ಞೆ ಹೊರಡಿಸಿದನು.


ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.


ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.


ಇಸ್ರೇಲರು ಬೇತೇಲ್ ನಗರಕ್ಕೆ ಹೋದರು. ಅಲ್ಲಿ ಅವರು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತುಕೊಂಡರು. ಅಲ್ಲಿ ಕುಳಿತುಕೊಂಡು ಅವರು ಗಟ್ಟಿಯಾಗಿ ಅತ್ತರು.


ಸೌಲನು ವಾಸವಾಗಿದ್ದ ಗಿಬೆಯಕ್ಕೆ ಸಂದೇಶಕರು ಬಂದು ಜನರಿಗೆ ಸುದ್ದಿಯನ್ನು ತಿಳಿಸಿದರು. ಜನರು ಗಟ್ಟಿಯಾಗಿ ಅತ್ತರು.


ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.


ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.


ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.


ಮರುದಿನ ಬೆಳಿಗ್ಗೆ ಅವರು ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅವರು ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು