ನ್ಯಾಯಸ್ಥಾಪಕರು 20:27 - ಪರಿಶುದ್ದ ಬೈಬಲ್27 ಇಸ್ರೇಲರು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಿದರು. (ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೇತೇಲಿನಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಕಾಲದಲ್ಲಿ ಸರ್ವೇಶ್ಬರನ ಒಡಂಬಡಿಕೆಯ ಮಂಜೂಷವು ಆ ಊರೊಳಗೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಏಕೆಂದರೆ ಆ ದಿವಸಗಳಲ್ಲಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ, ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.
ಸಮುವೇಲನು, “ನೀನು ಅಲ್ಲಿಂದ ಮುಂದೆ ಹೋಗುತ್ತಾ ತಾಬೋರಿನ ಹತ್ತಿರವಿರುವ ಒಂದು ದೊಡ್ಡ ಓಕ್ ವೃಕ್ಷದ ಬಳಿಗೆ ಬರುವೆ. ಅಲ್ಲಿ ನಿನ್ನನ್ನು ಮೂರು ಜನರು ಭೇಟಿಯಾಗುತ್ತಾರೆ. ಆ ಮೂರು ಜನರು ದೇವರ ಆರಾಧನೆಗಾಗಿ ಬೇತೇಲಿಗೆ ಹೋಗುತ್ತಿರುತ್ತಾರೆ. ಮೊದಲನೆಯವನು ಮೂರು ಮರಿ ಹೋತಗಳನ್ನೂ ಎರಡನೆಯವನು ಮೂರು ರೊಟ್ಟಿಗಳನ್ನೂ ಮೂರನೆಯವನು ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋಗುತ್ತಿರುತ್ತಾರೆ.