ನ್ಯಾಯಸ್ಥಾಪಕರು 20:28 - ಪರಿಶುದ್ದ ಬೈಬಲ್28 ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?” ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, “ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕ ಸೇವೆಮಾಡುತ್ತಿದ್ದನು. ಇಂತಿರಲು ಇಸ್ರಯೇಲರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ” ಎಂದು ಸರ್ವೇಶ್ವರನನ್ನು ಕೇಳಿದರು. ಸರ್ವೇಶ್ವರನು ಅವರಿಗೆ, “ಹೋಗಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವದರಿಂದ ಇಸ್ರಾಯೇಲ್ಯರು - ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ - ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು. ಅಧ್ಯಾಯವನ್ನು ನೋಡಿ |