ನ್ಯಾಯಸ್ಥಾಪಕರು 20:31 - ಪರಿಶುದ್ದ ಬೈಬಲ್31 ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದೊಂದಿಗೆ ಯುದ್ಧಮಾಡಲು ಗಿಬೆಯ ನಗರದಿಂದ ಹೊರಗೆ ಬಂದಿತು. ಇಸ್ರೇಲಿನ ಸೈನಿಕರು ಹಿಮ್ಮೆಟ್ಟಿದರು; ಬೆನ್ಯಾಮೀನ್ಯರು ಅವರನ್ನು ಬೆನ್ನಟ್ಟಿದರು. ಈ ರೀತಿ ಬೆನ್ಯಾಮೀನ್ಯರ ಸೈನ್ಯವು ನಗರವನ್ನು ಬಿಟ್ಟು ಬಹಳ ದೂರಹೋಗುವಂತೆ ಮಾಡಿದರು. ಬೆನ್ಯಾಮೀನ್ಯರ ಸೈನಿಕರು ಮುಂಚಿನಂತೆ ಕೆಲವು ಜನ ಇಸ್ರೇಲಿ ಸೈನಿಕರನ್ನು ಕೊಲ್ಲಲು ಆರಂಭಿಸಿದರು. ಅವರು ಸುಮಾರು ಮೂವತ್ತು ಜನ ಇಸ್ರೇಲರನ್ನು ಕೊಂದರು. ಅವರಲ್ಲಿ ಕೆಲವರನ್ನು ಹೊಲಗಳಲ್ಲಿ ಕೊಂದರು. ಒಂದು ದಾರಿ ಬೇತೇಲ್ ನಗರಕ್ಕೆ ಹೋಗುತ್ತಿತ್ತು. ಇನ್ನೊಂದು ದಾರಿ ಗಿಬೆಯಕ್ಕೆ ಹೋಗುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಬೆನ್ಯಾಮೀನ್ಯರು ಇಸ್ರಾಯೇಲ್ಯರೊಡನೆ ಯುದ್ಧಮಾಡವುದಕ್ಕಾಗಿ ಪಟ್ಟಣವನ್ನು ಬಿಟ್ಟು ಊರೊಳಕ್ಕೆ ಬಂದರು. ಅವರು ಮೊದಲಿನಂತೆ ಜನರನ್ನು ಕೊಲ್ಲುವುದಕ್ಕೆ ಪ್ರಾರಂಭಿಸಿ ಬೇತೇಲಿಗೂ, ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಬೆನ್ಯಾಮೀನ್ಯರು ಇಸ್ರಯೇಲರೊಡನೆ ಯುದ್ಧ ಮಾಡುವುದಕ್ಕಾಗಿ ಪಟ್ಟಣವನ್ನು ಬಿಟ್ಟು ದೂರಕ್ಕೆ ಬಂದರು. ಅವರು ಮುಂಚಿನಂತೆ ಜನರನ್ನು ವಧಿಸುವುದಕ್ಕೆ ಪ್ರಾರಂಭಿಸಿ ಬೇತೇಲಿಗೂ ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಬೆನ್ಯಾಮೀನ್ಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಪಟ್ಟಣವನ್ನು ಬಿಟ್ಟು ದೂರಕ್ಕೆ ಬಂದರು. ಅವರು ಮುಂಚಿನಂತೆ ಜನರನ್ನು ವಧಿಸುವದಕ್ಕೆ ಪ್ರಾರಂಭಿಸಿ ಬೇತೇಲಿಗೂ ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜ ಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಬೆನ್ಯಾಮೀನ್ಯರು ಇಸ್ರಾಯೇಲ್ ಜನಕ್ಕೆ ಎದುರಾಗಿ ಹೊರಟು, ಪಟ್ಟಣದ ಬಳಿಯಿಂದ ಹೊರಬಂದು, ಅಡವಿಯಲ್ಲಿ ಹೆದ್ದಾರಿಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ, ಅಧ್ಯಾಯವನ್ನು ನೋಡಿ |