Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:35 - ಪರಿಶುದ್ದ ಬೈಬಲ್‌

35 ಯೆಹೋವನು ಇಸ್ರೇಲಿನ ಸೈನ್ಯದಿಂದ ಬೆನ್ಯಾಮೀನ್ಯರ ಸೈನ್ಯವನ್ನು ಸೋಲಿಸಿದನು. ಆ ದಿನ ಇಸ್ರೇಲಿ ಸೈನಿಕರು ಬೆನ್ಯಾಮೀನ್ಯರ ಇಪ್ಪತೈದು ಸಾವಿರದ ನೂರು ಸೈನಿಕರನ್ನು ಕೊಂದುಹಾಕಿದರು. ಆ ಸೈನಿಕರೆಲ್ಲಾ ಯುದ್ಧದ ತರಬೇತಿ ಪಡೆದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೋವನು ಇಸ್ರಾಯೇಲರಿಗೆ ಜಯವನ್ನು ಕೊಟ್ಟಿದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯರ ಯೋಧರನ್ನು ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸರ್ವೇಶ್ವರ ಇಸ್ರಯೇಲರಿಗೆ ಜಯಕೊಟ್ಟದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಯೋಧರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆಹೋವನು ಇಸ್ರಾಯೇಲ್ಯರಿಗೆ ಜಯಕೊಟ್ಟದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಭಟರನ್ನು ಹತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಯೆಹೋವ ದೇವರು ಇಸ್ರಾಯೇಲಿನ ಮುಂದೆ ಬೆನ್ಯಾಮೀನ್ಯರನ್ನು ಹೊಡೆದರು. ಆ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಲ್ಲಿ ಖಡ್ಗ ಹಿಡಿಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯರನ್ನು ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:35
5 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು.


ಇಸ್ರೇಲಿನ ಹತ್ತು ಸಾವಿರ ಸೈನಿಕರು ಅಂದರೆ ತರಬೇತಿ ಪಡೆದ ಸೈನಿಕರು ಗಿಬೆಯ ನಗರದ ಮೇಲೆ ಧಾಳಿಮಾಡಿದರು. ಘೋರವಾದ ಯುದ್ಧ ನಡೆಯಿತು. ಆದರೆ ಇಂಥ ಭೀಕರ ಪರಿಸ್ಥಿತಿ ಉಂಟಾಗಬಹುದೆಂಬುದು ಬೆನ್ಯಾಮೀನ್ಯರಿಗೆ ತಿಳಿದಿರಲಿಲ್ಲ.


ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರೇಲರ ಸೈನಿಕರು ಹಿಮ್ಮೆಟ್ಟಿದ್ದರು. ಗಿಬೆಯದ ಹತ್ತಿರ ಅಡಗಿಕೊಂಡಿದ್ದ ತಮ್ಮ ಜನರು ಹಠಾತ್ ಧಾಳಿಮಾಡುವರೆಂದು ನಂಬಿ ಅವರು ಹಿಮ್ಮೆಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು