ನ್ಯಾಯಸ್ಥಾಪಕರು 20:38 - ಪರಿಶುದ್ದ ಬೈಬಲ್38 ಇಸ್ರೇಲರು ಅಡಗಿಕೊಂಡಿದ್ದ ಜನರಿಗೆ ಒಂದು ಸಂಕೇತ ಕೊಡಬೇಕೆಂದು ತಿಳಿಸಿದ್ದರು. ಅಡಗಿಕೊಂಡಿದ್ದವರು ಬೆಂಕಿಹಚ್ಚಿ ಆಕಾಶಕ್ಕೆ ಹೊಗೆ ಏರುವಂತೆ ಮಾಡುವುದೇ ಆ ಸಂಕೇತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ ಓಡಿಹೋಗುತ್ತಿದ್ದವರು ತಿರುಗಿಕೊಂಡು ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚುಗಾರರೂ ಉಳಿದ ಇಸ್ರಯೇಲರೂ ತಮ್ಮ ತಮ್ಮೊಳಗೆ ಗೊತ್ತುಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ ಓಡಿಹೋಗುತ್ತಿದ್ದವರು ತಿರುಗಿಕೊಂಡು ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚಿನೋಡುವವರೂ ಉಳಿದ ಇಸ್ರಾಯೇಲ್ಯರೂ ತಮ್ಮ ತಮ್ಮೊಳಗೆ ಗೊತ್ತು ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಇಸ್ರಾಯೇಲರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇನೆಂದರೆ, ಪಟ್ಟಣದಲ್ಲಿಂದ ಮಹಾ ದೊಡ್ಡ ಹೊಗೆಯನ್ನು ಏಳ ಮಾಡುವುದೇ. ಅಧ್ಯಾಯವನ್ನು ನೋಡಿ |
“ಆಯಿ”ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲಿನ ಜನರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ”ಯ ಜನರೊಂದಿಗೆ ಹೋರಾಡತೊಡಗಿದರು. “ಆಯಿ”ಯ ಜನರಿಗೆ ಓಡಿಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ.