ನ್ಯಾಯಸ್ಥಾಪಕರು 20:39 - ಪರಿಶುದ್ದ ಬೈಬಲ್39-41 ಬೆನ್ಯಾಮೀನ್ಯರ ಸೈನಿಕರು ಸುಮಾರು ಮೂವತ್ತು ಜನ ಇಸ್ರೇಲಿ ಸೈನಿಕರನ್ನು ಕೊಂದುಹಾಕಿದ್ದರು. ಆದ್ದರಿಂದ ಬೆನ್ಯಾಮೀನ್ಯರು, “ನಾವು ಮುಂಚಿನಂತೆ ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು. ಆಗ ನಗರದಿಂದ ಹೊಗೆಯು ಸ್ತಂಭದೋಪಾದಿಯಲ್ಲಿ ಮೇಲೇರುತ್ತಿತ್ತು. ಬೆನ್ಯಾಮೀನ್ಯರು ಹಿಂತಿರುಗಿ ನೋಡಿದಾಗ ಅವರಿಗೆ ಹೊಗೆ ಕಾಣಿಸಿತು. ಇಡೀ ನಗರವು ಉರಿಯುತ್ತಿತ್ತು. ಆಗ ಇಸ್ರೇಲರ ಸೈನಿಕರು ಓಡಿಹೋಗುವುದನ್ನು ನಿಲ್ಲಿಸಿ ಯುದ್ಧ ಮಾಡುವುದಕ್ಕೆ ಪ್ರಾರಂಭಿಸಿದರು. ಬೆನ್ಯಾಮೀನ್ಯರು ಅಂಜಿದರು. ಎಂಥ ಭಯಾನಕ ಪರಿಸ್ಥಿತಿ ಉಂಟಾಗಿದೆ ಎಂಬುದು ಈಗ ಅವರಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಬೆನ್ಯಾಮೀನ್ಯರಾದರೋ, “ಇಸ್ರಾಯೇಲ್ಯರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರು” ಎಂದು ತಿಳಿದು ಅವರನ್ನು ಹತಮಾಡಲು ಪ್ರಾರಂಭಿಸಿ, ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಬೆನ್ಯಾಮೀನ್ಯರಾದರೋ, ಇಸ್ರಯೇಲರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರೆಂದು ನೆನೆಸಿ ಅವರನ್ನು ಸಂಹರಿಸಲು ಪ್ರಾರಂಭಿಸಿ ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಬೆನ್ಯಾಮೀನ್ಯರಾದರೋ - ಇಸ್ರಾಯೇಲ್ಯರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರೆಂದು ನೆನಸಿ ಅವರನ್ನು ಹತಿಸ ಪ್ರಾರಂಭಿಸಿ ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ತದನಂತರ ಇಸ್ರಾಯೇಲರು ಪ್ರತಿದಾಳಿ ನಡೆಸಿದರು. ಬೆನ್ಯಾಮೀನ್ಯರು ಇಸ್ರಾಯೇಲರನ್ನು ಹೊಡೆಯುವುದಕ್ಕೆ ಪ್ರಾರಂಭಿಸಿ, ಅವರಲ್ಲಿ ಹೆಚ್ಚು ಕಡಿಮೆ ಮೂವತ್ತು ಜನರನ್ನು ಕೊಂದಾಗ, “ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಸೋತುಹೋದರು,” ಎಂದು ಅಂದುಕೊಂಡರು. ಅಧ್ಯಾಯವನ್ನು ನೋಡಿ |