ನ್ಯಾಯಸ್ಥಾಪಕರು 20:42 - ಪರಿಶುದ್ದ ಬೈಬಲ್42 ಬೆನ್ಯಾಮೀನ್ಯರ ಸೈನಿಕರು ಇಸ್ರೇಲ್ ಸೈನಿಕರಿಂದ ತಪ್ಪಿಸಿಕೊಂಡು ಓಡತೊಡಗಿದರು. ಅವರು ಮರುಭೂಮಿಯ ಕಡೆಗೆ ಓಡಿದರು. ಆದರೆ ಯುದ್ಧದಿಂದ ತಪ್ಪಿಸಿಕೊಳ್ಳುವುದು ಅವರಿಂದ ಆಗಲಿಲ್ಲ. ನಗರಗಳಿಂದ ಇಸ್ರೇಲರು ಹೊರಬಂದು ಅವರನ್ನು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವರು ಇಸ್ರಾಯೇಲರಿಗೆ ಬೆನ್ನು ತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧವೀರರು ಅವರನ್ನು ಹಿಂದಟ್ಟಿದ್ದರಿಂದಲೂ, ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಹೊರಗೆ ಬಂದುಬಿಟ್ಟಿದ್ದರಿಂದಲೂ, ಅವರು ಇಬ್ಬರ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅವರು ಇಸ್ರಯೇಲರಿಗೆ ಬೆನ್ನುತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಸೈನಿಕರು ಅವರನ್ನು ಹಿಂದಟ್ಟಿದ್ದರಿಂದಲೂ ಪಟ್ಟಣಕ್ಕೆ ಬೆಂಕಿಹೊತ್ತಿಸಿದವರು ಬಂದುಬಿಟ್ಟದ್ದರಿಂದಲೂ ಅವರು ಉಭಯರ ಮಧ್ಯದಲ್ಲಿ ಸಿಕ್ಕಿ ಹಾಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಅವರು ಇಸ್ರಾಯೇಲ್ಯರಿಗೆ ಬೆನ್ನುತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧಸ್ಥರು ಅವರನ್ನು ಹಿಂದಟ್ಟಿದ್ದರಿಂದಲೂ ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಬಂದುಬಿಟ್ಟದ್ದರಿಂದಲೂ ಅವರು ಉಭಯರ ಮಧ್ಯದಲ್ಲಿ ಸಿಕ್ಕಿ ಹಾಳಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವರು ಇಸ್ರಾಯೇಲರ ಮುಂದೆ ಮರುಭೂಮಿಯ ಮಾರ್ಗಕ್ಕೆ ತಿರುಗಿಕೊಂಡು ಹೋದರು. ಆದರೆ ಸೈನಿಕರು ಅವರನ್ನು ಹಿಡಿದು, ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |