ನ್ಯಾಯಸ್ಥಾಪಕರು 20:46 - ಪರಿಶುದ್ದ ಬೈಬಲ್46 ಆ ದಿನ ಬೆನ್ಯಾಮೀನ್ಯರ ಇಪ್ಪತ್ತೈದು ಸಾವಿರ ಜನ ಸೈನಿಕರು ಕೊಲ್ಲಲ್ಪಟ್ಟರು. ಅವರೆಲ್ಲರೂ ಕೈಯಲ್ಲಿ ಖಡ್ಗ ಹಿಡಿದು ಬಹಳ ಶೂರತನದಿಂದ ಯುದ್ಧ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಸೈನಿಕರು ಸಂಹರಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಯೋಧರು ಸಂಹೃತರಾದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಭಟರು ಸಂಹೃತರಾದರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಹೀಗೆಯೇ ಬೆನ್ಯಾಮೀನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಖಡ್ಗ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು. ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ಯರ ಸೈನಿಕರು ಹಿಂತಿರುಗಿ ಮರುಭೂಮಿಯ ಕಡೆಗೆ ಓಡಿದರು. ಅವರು ರಿಮ್ಮೋನ್ ಗಿರಿಯ ಕಡೆಗೆ ಓಡಿಹೋದರು. ಆದರೆ ಇಸ್ರೇಲಿ ಸೈನಿಕರು ದಾರಿಯ ಉದ್ದಕ್ಕೂ ಐದು ಸಾವಿರ ಬೆನ್ಯಾಮೀನ್ ಸೈನಿಕರನ್ನು ಕೊಂದುಹಾಕಿದರು. ಅವರು ಬೆನ್ಯಾಮೀನ್ಯರನ್ನು ಬೆನ್ನಟ್ಟುತ್ತಲೇ ಇದ್ದರು. ಅವರನ್ನು ಗಿದೋಮಿನವರೆಗೆ ಬೆನ್ನಟ್ಟಿಕೊಂಡು ಹೋದರು. ಅಲ್ಲಿ ಇಸ್ರೇಲ್ ಸೈನಿಕರು ಇನ್ನೂ ಎರಡು ಸಾವಿರ ಜನ ಬೆನ್ಯಾಮೀನ್ಯರನ್ನು ಕೊಂದುಹಾಕಿದರು.