ನ್ಯಾಯಸ್ಥಾಪಕರು 20:47 - ಪರಿಶುದ್ದ ಬೈಬಲ್47 ಆದರೆ ಬೆನ್ಯಾಮೀನ್ಯರ ಆರುನೂರು ಜನರು ತಪ್ಪಿಸಿಕೊಂಡು ಮರುಭೂಮಿಗೆ ಓಡಿಹೋದರು. ಅವರು ರಿಮ್ಮೋನ್ ಗಿರಿ ಎಂಬ ಸ್ಥಳಕ್ಕೆ ಓಡಿಹೋದರು. ಅಲ್ಲಿ ಅವರು ನಾಲ್ಕು ತಿಂಗಳುಗಳವರೆಗೆ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ, ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಆದರೆ ಆರುನೂರು ಮಂದಿ ಮರುಭೂಮಿ ಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಆದರೆ ಆರುನೂರು ಮಂದಿ ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ, ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.